ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ದೇಶದಾದ್ಯಂತ ಆಜಾದಿ ಕಾ ಅಮೃತ ಮಹೋತ್ಸವದ ಸಂಭ್ರಮ ಮನೆ ಮಾಡಿರುವಂತೆಯೇ ನಗರದ ಗೋಡೆ ಗೋಡೆಗಳ ಮೇಲೆ ಇದರ ಚಿತ್ರಗಳು ವಿರಾಜಿಸುತ್ತಿವೆ.
ಹುಬ್ಬಳ್ಳಿ ಕ್ಯಾನ್ಸರ್ ಆಸ್ಪತ್ರೆಯ ಕಾಂಪೌಂಡ್ ಗೋಡೆಗಳ ಮೇಲೆ ದೇಶಭಿಮಾನ, ಸ್ವಾತಂತ್ರದ ಅಮೃತ ಮಹೋತ್ಸವದ ಚಿತ್ರಕಲೆಗಳನ್ನು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ಈರೇಶ ಅಂಚಟಗೇರಿ ರವರು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಚಿತ್ರಗಳನ್ನು ಬಿಡಿಸಿದ ಚಿತ್ರಗಾರರಿಗೆ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪಾಲಿಕೆಯ ಸದಸ್ಯರಾದ ಸುನೀತಾ ಮಾಳವದಕರ, ಮಂಜುನಾಥ ಬುರ್ಲಿ, ಚಂದ್ರಶೇಖರ ಮನಗುಂಡಿ, ಪಾಲಿಕೆಯ ವಲಯ ಆಯುಕ್ತರಾದ ರಮೇಶ ನೂಲ್ವಿ ಹಾಗೂ ಭಾಗದ ನಾಗರಿಕರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post