ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಮಣಿಪಾಲ: ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತತಿರುವ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದಂಗಳವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಶುಕ್ರವಾರ ಮುಂಜಾನೆ ತೀವ್ರವಾಗಿ ಅಸ್ವಸ್ಥರಾಗಿದ್ದ ಶ್ರೀಗಳನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ. ವೆಂಟಿಲೇಟರ್ ಮೂಲಕ ಶ್ರೀಗಳ ಉಸಿರಾಡುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ.
ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿರುವ ಹಿನ್ನೆಲೆಯಲ್ಲಿ ಚಿಕಿತ್ಸಾ ವಿಧಾನವನ್ನು ಮತ್ತಷ್ಟು ಬದಲಿಸಲಾಗುತ್ತಿದೆ ಎಂದು ಹೇಳಲಾಗಿದೆ.
ಇನ್ನು, ಶ್ರೀಗಳ ಶಿಷ್ಯೆ ಉಮಾಭಾರತಿ ಇಂದು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದು, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಗಣ್ಯಾತಿಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ ಗುರುಗಳ ಆರೋಗ್ಯ ವಿಚಾರಿಸುತ್ತಿದ್ದಾರೆ.
ಹಾಗೆಯೇ, ಶ್ರೀಗಳು ಶೀಘ್ರ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಲಿ ಎಂದು ನಾಡಿನ ಹಲವು ಮಠ ಮಾನ್ಯಗಳು, ಭಕ್ತರು ಪೂಜೆ, ಪ್ರಾರ್ಥನೆ, ಜಪತಪಗಳನ್ನು ಮಾಡುತ್ತಿದ್ದಾರೆ.
Get in Touch With Us info@kalpa.news Whatsapp: 9481252093

