ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಹೆಸರಾಂತ ರಂಗಕರ್ಮಿ ಸಿ.ಜಿ. ಕೃಷ್ಣಸ್ವಾಮಿ ಅವರ ಸ್ಮರಣಾರ್ಥ ಭಾರತೀಯ ಅಂಚೆ ಇಲಾಖೆ ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು.
ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆಗೊಳಿಸಲಾಯಿತು.
ರಾಜ್ಯಸಭಾ ಸದಸ್ಯ ಕೆ.ಸಿ. ರಾಮಮೂರ್ತಿ, ಕರ್ನಾಟಕ ವೃತ್ತದ ಮಹಾ ಪ್ರಧಾನ ಅಂಚೆ ಪಾಲಕರಾದ ಶಾರದಾ ಸಂಪತ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ, ಹಿರಿಯ ರಂಗಕರ್ಮಿ ಕೆ.ವಿ. ನಾಗರಾಜ ಮೂರ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ರಂಗಪ್ಪ ಹಾಗೂ ಇತರ ಗಣ್ಯರು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post