ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಪ್ರಧಾನಿ ನರೇಂದ್ರ ಮೋದಿ #PMNarendraModi ಅವರನ್ನು 6 ವರ್ಷಗಳ ಕಾಲ ಚುನಾವಣೆಯಿಂದ ನಿರ್ಬಂಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ #SupremeCourt ನಿರಾಕರಿಸಿ, ವಜಾ ಮಾಡಿದೆ.
ಪ್ರಜಾಪ್ರತಿನಿಧಿ ಕಾಯ್ದೆಯಡಿ #RepresentationofthePeopleAct ಪ್ರಧಾನಿ ಮೋದಿ ಅವರನ್ನು ಆರು ವರ್ಷಗಳ ಕಾಲ ಚುನಾವಣೆಯಿಂದ ಅನರ್ಹಗೊಳಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ವಕೀಲ ಆನಂದ್ ಎಸ್. ಜೊಂಧಲೆ ಮೂಲಕ ಫಾತಿಮಾ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತ್ತು.

Also read: ಆ ತಿಮಿಂಗಿಲ ಹಿಡೀರಿ, ಎಲ್ಲವೂ ಹೊರ ಬರುತ್ತೆ | ಎಚ್.ಡಿ. ಕುಮಾರಸ್ವಾಮಿ ಹೀಗೆ ಹೇಳಿದ್ದೇಕೆ?
ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಎಸ್ಸಿ ಶರ್ಮಾ ಅವರ ಪೀಠವು ಅರ್ಜಿದಾರರಿಗೆ ದೂರು ಪರಿಹಾರಕ್ಕಾಗಿ ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಸಲು ಹೇಳಿದೆ.
ನೀವು ಅಧಿಕಾರಿಗಳನ್ನು ಸಂಪರ್ಕಿಸಿದ್ದೀರಾ? ರಿಟ್ ಆಫ್ ಮ್ಯಾಂಡಮಸ್’ಗಾಗಿ ನೀವು ಮೊದಲು ಅಧಿಕಾರಿಗಳನ್ನು ಸಂಪರ್ಕಿಸಬೇಕು ಎಂದು ಪೀಠ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಅರ್ಜಿದಾರರು ಅರ್ಜಿಯನ್ನು ಹಿಂಪಡೆದುಕೊಂಡರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















Discussion about this post