Read - < 1 minute
ನವದೆಹಲಿ: ತೈಲ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ದೇಶದ ಜನರಿಗೆ ಈಗ ಇಳಿಕೆಯ ಆನಂದ ದೊರೆಯುತ್ತಿದ್ದು, ಸತತ 5ನೆಯ ದಿನವೂ ಸಹ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆಯಾಗಿದೆ.
ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾದ ಹಿನ್ನೆಲೆಯಲ್ಲಿ ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳು ಇಳಿಕೆಯಾಗಿದ್ದು, ಸರ್ಕಾರಿ ಸ್ವಾಮ್ಯದ ಕಂಪನಿಗಳು ಪ್ರತೀ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಕ್ರಮವಾಗಿ 30 ಪೈಸೆ ಮತ್ತು 27 ಪೈಸೆ ಇಳಿಸಿವೆ.
Discussion about this post