Read - 2 minutes
ಕಲ್ಪ ಮೀಡಿಯಾ ಹೌಸ್ | ಅಹಮದಾಬಾದ್ |
ಅಯೋಧ್ಯಾ ರಾಮ ಮಂದಿರ ಸ್ಫೋಟಿಸಲು ಸಂಚು ರೂಪಿಸಲಾಗಿತ್ತು ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.
Also Read>> The Orphanage “Sampattu” is a Gurukulam
ಈ ಕುರಿತಂತೆ ಗುಜರಾತ್ ಎಟಿಎಸ್ ನಡೆಸಿದ ಕಾರ್ಯಾಚರಣೆಯಲ್ಲಿ ಉಗ್ರ ಸಂಘಟನೆ ಜೊತೆಯಲ್ಲಿ ಸಂಬಂಧ ಹೊಂದಿರುವ ಅಬ್ದುಲ್ ರೆಹಮಾನ್ ಎಂಬಾತನನ್ನು ಬಂಧಿಸಿದ್ದಾರೆ.
ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ ಶಂಕಿತ ಉಗ್ರ 19 ವರ್ಷದ ಅಬ್ದುಲ್ ರೆಹಮಾನ್‌ನನ್ನು ಹರಿಯಾಣದ ಫರಿದಾಬಾದ್ ನಲ್ಲಿ ಬಂಧಿಸಲಾಗಿದೆ.
ಖಚಿತ ಮಾಹಿತಿಯ ಆಧಾರದಲ್ಲಿ ಫರೀದಾಬಾದ್ ಪೊಲೀಸರ ಸಹಕಾರದಲ್ಲಿ ಎಟಿಎಸ್ ನಡೆಸಿದ ಕಾರ್ಯಾಚರಣೆಯಲ್ಲಿ ವಿಚಾರಣೆಯ ಸಮಯದಲ್ಲಿ ಸಂಗ್ರಹಿಸಲಾದ ಗುಪ್ತಚರ ಮಾಹಿತಿಯ ಮೇರೆಗೆ ದಾಳಿ ನಡೆಸಿ ಅಬ್ದುಲ್ ರೆಹಮಾನ್ ನನ್ನು ಬಂಧಿಸಲಾಗಿದೆ.
ದಾಳಿ ವೇಳೆ ಪಾಳುಬಿದ್ದ ಮನೆಯೊಂದರಲ್ಲಿ ಎರಡು ಜೀವಂತ ಹ್ಯಾಂಡ್ ಗ್ರೆನೇಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮೂಲಗಳ ಪ್ರಕಾರ, ಅಯೋಧ್ಯೆಯ ರಾಮಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂದು ಹೇಳಲಾಗುತ್ತಿದೆ.
ಕೇಂದ್ರ ಸಂಸ್ಥೆಯ ಗುಪ್ತಚರ ಮಾಹಿತಿಯ ಮೇರೆಗೆ, ಭದ್ರತಾ ಪಡೆಗಳು ಸೋಹ್ನಾ ರಸ್ತೆಯ ಪಾಲಿ ಪ್ರದೇಶದ ಶಿಥಿಲಗೊಂಡ ಮನೆಯಲ್ಲಿ ಆತನನ್ನು ಪತ್ತೆಹಚ್ಚಿವೆ.
ಹರಿಯಾಣ ಬಳಿ ಇಬ್ಬರು ಭಯೋತ್ಪಾದಕರ ಉಪಸ್ಥಿತಿಯನ್ನು ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ.
ಅವರಲ್ಲಿ ಒಬ್ಬನನ್ನು 19 ವರ್ಷದ ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ಆತನನ್ನು ಬಂಧಿಸಲಾಗಿದ್ದು ಹರಿಯಾಣದಲ್ಲಿ ಆತನ ವಿರುದ್ಧ ದೂರು ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
© 2025 Kalpa News - All Rights Reserved | Powered by Kalahamsa Infotech Pvt. ltd.
© 2025 Kalpa News - All Rights Reserved | Powered by Kalahamsa Infotech Pvt. ltd.
Discussion about this post