No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Tuesday, August 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಒಂದು ವರ್ಷದಲ್ಲಿ ಶಿವಮೊಗ್ಗ ಏರ್’ಪೋರ್ಟ್ ಕಾರ್ಯಾರಂಭಕ್ಕೆ ಯೋಜನೆ, ರಿಂಗ್ ರಸ್ತೆ ಅಭಿವೃದ್ಧಿಗೆ ಚಾಲನೆ: ಸಿಎಂ ಯಡಿಯೂರಪ್ಪ

kalpa News by kalpa News
August 31, 2019
in ಶಿವಮೊಗ್ಗ
0
ಒಂದು ವರ್ಷದಲ್ಲಿ ಶಿವಮೊಗ್ಗ ಏರ್’ಪೋರ್ಟ್ ಕಾರ್ಯಾರಂಭಕ್ಕೆ ಯೋಜನೆ, ರಿಂಗ್ ರಸ್ತೆ ಅಭಿವೃದ್ಧಿಗೆ ಚಾಲನೆ: ಸಿಎಂ ಯಡಿಯೂರಪ್ಪ
Share on FacebookShare on TwitterShare on WhatsApp

ಶಿವಮೊಗ್ಗ: ಜಿಲ್ಲೆಯಲ್ಲಿ ನೆರೆ ಪರಿಹಾರ ಕಾಮಗಾರಿಗಳನ್ನು ತುರ್ತಾಗಿ ಕೈಗೊಳ್ಳಲು ತಕ್ಷಣ 10 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಅವರು ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನೆರೆ ಪರಿಹಾರ ಕಾರ್ಯಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.

ರಾಜ್ಯದಲ್ಲಿ ನೆರೆ ಪರಿಹಾರ ಕಾಮಗಾರಿಗಳಿಗೆ ಈಗಾಗಲೇ 500 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ತುರ್ತು ಕಾರ್ಯಗಳನ್ನು ಕೈಗೊಳ್ಳಲು ಇಂದೇ 10 ಕೋಟಿ ರೂ. ಅನುದಾನ ಹೆಚ್ಚುವರಿಯಾಗಿ ಬಿಡುಗಡೆ ಮಾಡಲು ಆದೇಶಿಸಲಾಗಿದೆ. ಪ್ರಧಾನಮಂತ್ರಿ ಅವರು ಸೆಪ್ಟಂಬರ್ ಪ್ರಥಮ ವಾರದಲ್ಲಿ ರಾಜ್ಯಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ನೆರೆ ಪರಿಹಾರಕ್ಕೆ ಹೆಚ್ಚಿನ ಅನುದಾನ ಒದಗಿಸುವ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.

ನೆರೆ ಪರಿಹಾರ ಕಾರ್ಯಗಳ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ನೆರೆಪೀಡಿತರಾದ 6089 ಕುಟುಂಬಗಳಿಗೆ ತಲಾ 10 ಸಾವಿರದಂತೆ ಪರಿಹಾರದ ಮೊತ್ತವನ್ನು ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ. 11 ಮಾನವ ಜೀವ ಹಾನಿ ಪ್ರಕರಣಗಳಲ್ಲಿ ಸಹ ತಲಾ ಐದು ಲಕ್ಷ ರೂ. ಪರಿಹಾರ ಒದಗಿಸಲಾಗಿದೆ. ಹಾನಿಗೀಡಾದ ಮನೆಗಳ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಲಾಗಿದ್ದು, ಒಟ್ಟು 4048 ಮನೆಗಳಿಗೆ ಹಾನಿ ಉಂಟಾಗಿದೆ. ಮನೆ ಹಾನಿ ಕುರಿತು ಜಿಪಿಎಸ್ ಮಾಡಿಸಲಾಗುತ್ತಿದ್ದು, 1531 ಪ್ರಕರಣಗಳಲ್ಲಿ ಮನೆಯ ಸೂಕ್ತ ದಾಖಲೆಗಳು ಇರುವುದಿಲ್ಲ. ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ತಾತ್ಕಾಲಿಕ ಪರಿಹಾರ ಒದಗಿಸಲು ಬಿಟ್ಟು ಹೋಗಿರುವ ಕುಟುಂಬಗಳು ಇದ್ದರೆ ಅವರನ್ನು ಗುರುತಿಸಿ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು. ಜಾನುವಾರುಗಳ ಕೊಟ್ಟಿಗೆಗಳಿಗೆ ಹಾನಿ ಉಂಟಾಗಿದ್ದರೆ ಸ್ಥಳ ಪರಿಶೀಲನೆ ನಡೆಸಿ ಪರಿಹಾರ ಒದಗಿಸಬೇಕು. ನಷ್ಟ ಅಂದಾಜು ಮಾಡುವ ಸಂದರ್ಭದಲ್ಲಿ ಸ್ವಲ್ಪ ಉದಾರತೆಯನ್ನು ತೋರಬೇಕು ಎಂದು ಮುಖ್ಯಮಂತ್ರಿ ಅವರು ಈ ಸಂದರ್ಭದಲ್ಲಿ ತಿಳಿಸಿದರು.

ಮರಳಿಗೆ ಸಮಸ್ಯೆ ಮಾಡಬೇಡಿ: ಬಡವರು ಮನೆ ಕಟ್ಟಲು ಸಾಗಾಟ ಮಾಡುವ ಮರಳನ್ನು ಹಿಡಿದು ಕಿರುಕುಳ ನೀಡುವ ದೂರುಗಳು ಇನ್ನು ಬರಬಾರದು. ಇಂತಹ ದೂರುಗಳು ಬಂದರೆ ಸಂಬಂಧಪಟ್ಟವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಇದಕ್ಕೂ ಮೊದಲು ಹೆಲಿಪ್ಯಾಡ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದ ಸರ್ವಾಂಗೀಣ ಅಭಿವೃದ್ಧಿಗೆ ಈಗಾಗಲೇ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹಳೆ ಜೈಲು ಆವರಣದಲ್ಲಿ ಉದ್ಯಾನವನ ಸೇರಿದಂತೆ ನಾಗರಿಕ ಸೌಲಭ್ಯಗಳನ್ನು ಕಲ್ಪಿಸುವ ನೀಲ ನಕಾಶೆಯನ್ನು ಅಧಿಕಾರಿಗಳು ಈಗಾಗಲೇ ಸಲ್ಲಿಸಿದ್ದಾರೆ. ಇದಕ್ಕೆ ಅಗತ್ಯ ಅನುದಾನವನ್ನು ಬಿಡುಗಡೆ ಮಾಡಲಾಗುವುದು. ಒಂದು ವರ್ಷದ ಒಳಗಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಾರಂಭಿಸಲು ಯೋಜನೆ ರೂಪಿಸಲಾಗಿದ್ದು, ಈಗಾಗಲೇ 39 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ವರ್ತುಲ ರಸ್ತೆ ನಿರ್ಮಾಣ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಕಂದಾಯ ಸಚಿವ ಆರ್.ಅಶೋಕ್, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜ್ಯೋತಿ ವಿಜಯ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಪೊಲೀಸ್ ವರಿಷ್ಟಾಧಿಕಾರಿ ಶಾಂತರಾಜ್, ಶಾಸಕರಾದ ಅಶೋಕ ನಾಯ್ಕ, ಅರಗ ಜ್ಞಾನೇಂದ್ರ, ಹರತಾಳು ಹಾಲಪ್ಪ, ಕುಮಾರ ಬಂಗಾರಪ್ಪ, ರುದ್ರೇಗೌಡ, ಪ್ರಸನ್ನ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Tags: Chief Minister B.S. YeddyurappaFlood Relief WorkFloods in ShivamoggaKannada NewsMalnad NewsShivamoggaShivamogga Airportನೆರೆ ಪರಿಹಾರ ಕಾಮಗಾರಿಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಶಿವಮೊಗ್ಗ
Share268Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ-ನೆನೆಗುದಿಗೆ ಬಿದ್ದ ಕಾಮಗಾರಿಗಳಿಗೆ ಮತ್ತೆ ಚಾಲನೆ, ನಿರ್ಲಕ್ಷ್ಯ ಸಹಿಸಲ್ಲ: ಸಚಿವ ಈಶ್ವರಪ್ಪ ಖಡಕ್ ವಾರ್ನಿಂಗ್

Next Post

ಭದ್ರಾವತಿ-ಪ್ರತಿಭೆಗಳನ್ನು ಹೊರಹಾಕಲು ಪ್ರತಿಭಾ ಕಾರಂಜಿ ಸಹಕಾರಿ: ರಾಜಶೇಖರ್

kalpa News

kalpa News

Next Post
ಭದ್ರಾವತಿ-ಪ್ರತಿಭೆಗಳನ್ನು ಹೊರಹಾಕಲು ಪ್ರತಿಭಾ ಕಾರಂಜಿ ಸಹಕಾರಿ: ರಾಜಶೇಖರ್

ಭದ್ರಾವತಿ-ಪ್ರತಿಭೆಗಳನ್ನು ಹೊರಹಾಕಲು ಪ್ರತಿಭಾ ಕಾರಂಜಿ ಸಹಕಾರಿ: ರಾಜಶೇಖರ್

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL