ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕರ್ನಾಟಕ ಸೇರಿದಂತೆ ದೇಶದ ಹಲವು ಕಡೆಗಳಲ್ಲಿ ವಿದ್ವಂಸಕ ಕೃತ್ಯಕ್ಕೆ ಜೈಲಿನಲ್ಲಿ ಕುಳಿತೇ ಸಂಚು ರೂಪಿಸಿರುವ ಆರೋಪದ ಹಿನ್ನೆಲೆಯಲ್ಲಿ ಶಂಕಿತ ಮೂವರನ್ನು ಬಂಧಿಸಲಾಗಿದೆ.
ಬೆಂಗಳೂರಿನ ಮನೋವೈದ್ಯ, ಸಿಎಆರ್ ಪೊಲೀಸ್ ಅಧಿಕಾರಿ ಸೇರಿ ಮೂವರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆದಿದೆ.
ಎನ್’ಐಎ ಮೂವರನ್ನುಬಂಧಿಸಿದ್ದು, ಇಂದು ರಾತ್ರಿಯೊಳಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ ಎಂದು ಹೇಳಲಾಗಿದೆ.
ಈ ನಡುವೆಯೇ, ಉಗ್ರ ಟಿ.ನಾಸೀರ್ ಕುರಿತು ಹಲವು ಸ್ಫೋಟಕ ವಿಚಾರಗಳನ್ನು ಬಯಲಿಗೆಳೆದಿದ್ದು, ಆತಂಕ ಮೂಡಿಸಿದೆ.
2023ರಲ್ಲಿ ಹೆಬ್ಬಾಳದ ಮನೆಯಲ್ಲಿ ಜೀವಂತ ಗ್ರೆನೇಡ್ಗಳು ಪತ್ತೆಯಾಗಿದ್ದವು. ಜೀವಂತ ಗ್ರೆನೇಡನ್ನು ತರಲು ಟಿ. ನಾಸೀರ್ ಸೂಚಿಸಿದ್ದು, ಜುನೈದ್ ಮೂಲಕ ಇದನ್ನು ತರಿಸಿದ್ದ ಎನ್ನಲಾಗಿದೆ.
ನಾಸೀರ್’ನನ್ನು ವಶಕ್ಕೆ ಪಡೆದು ಎನ್’ಐಎ ವಿಚಾರಣೆ ನಡೆಸಿತ್ತು. ಈಗಾಗಲೇ ಬೆಂಗಳೂರು ಸ್ಫೋಟ ಪ್ರಕರಣದಲ್ಲಿ ನಾಸೀರ್ ಜೈಲಿನಲ್ಲಿದ್ದಾನೆ. ಭಯೋತ್ಪಾದನೆ ಬಗ್ಗೆ ಯುವಜನರ ಮೈಂಡ್ ವಾಶ್ ಮಾಡುವುದರಲ್ಲಿ ನಿಸ್ಸೀಮನಾಗಿದ್ದ ನಾಸೀರ್, ಹಲವು ಯುವಜನರನ್ನು ಉಗ್ರ ಚಟುವಟಿಕೆಗಳಿಗೆ ಬಳಸಿಕೊಂಡಿದ್ದಾನೆ ಎಂದೂ ಸಹ ಹೇಳಲಾಗಿದೆ.
ಇದೇ ವೇಳೆ, ಜೈಲಿನಲ್ಲಿ ಕುಳಿತುಕೊಂಡೇ ಈತ ಹಲವು ಉಗ್ರ ಚಟುವಟಿಕೆಗಳಿಗೆ ಸಂಚು ರೂಪಿಸಿದ್ದು, ಈತನೇ ಮಾಸ್ಟರ್ ಮೈಂಡ್ ಎಂದು ಹೇಳಲಾಗಿದೆ.
ಪ್ರಮುಖವಾಗಿ, 2008ರ ಸರಣಿ ಬಾಂಬ್ ಸ್ಫೋಟ, ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ, ಶಿವಮೊಗ್ಗದಲ್ಲಿ ಉಗ್ರ ಚಟುವಟಿಕೆ, ರಾಮೇಶ್ವರಂ ಕೆಫೆ ಬ್ಲಾಸ್ಟ್ ಸೇರಿ ಹಲವು ಪ್ರಕರಣಗಳಲ್ಲಿ ನಾಸೀರ್ ಕೈವಾಡ ಇದೆ ಎನ್ನಲಾಗಿದೆ.
ಅಷ್ಟು ಮಾತ್ರವಲ್ಲ ಬೆಂಗಳೂರಿನಲ್ಲಿ ದೊಡ್ಡಮಟ್ಟದ ವಿಧ್ವಂಸಕ ಕೃತ್ಯಕ್ಕೆ ಯೋಜನೆ ರೂಪಿಸಿದ್ದ ಎಂದು ಹೇಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post