ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 21ನೇ ಕಂತಿನ ಹಣ ಬಿಡುಗಡೆ ಸಮಾರಂಭವು ತಮಿಳುನಾಡಿನ #Tamilnadu ಕೊಯಮುತ್ತೂರಿನಲ್ಲಿ ಇಂದು ಪ್ರಧಾನಮಂತ್ರಿಗಳು ನೆರವೇರಿಸಿಕೊಟ್ಟಿದ್ದು, ಈ ಕಾರ್ಯಕ್ರಮದ ನೇರ ಪ್ರಸಾರವನ್ನು ಕೃಷಿ ವಿಜ್ಞಾನ ಕೇಂದ್ರ ಶಿವಮೊಗ್ಗದಲ್ಲಿ ರೈತರಿಗೋಸ್ಕರ ಆಯೋಜಿಸಲಾಗಿತ್ತು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ತಮಿಳುನಾಡಿನ ಕೊಯಮತ್ತೂರಿನಲ್ಲಿ ನೈಸರ್ಗಿಕ ಕೃಷಿ ಶೃಂಗ ಸಭೆಯನ್ನು ಉದ್ಘಾಟಿಸಿದರು. ಈ ದಿನ 21ನೇ ತಂತಿನ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿ ಒಟ್ಟು 9 ಕೋಟಿ ರೈತರಿಗೆ 18000 ಕೋಟಿ ರೂ.ಗಳಿಗಿಂತಲೂ ಅಧಿಕ ಹಣ ರೈತರ ಖಾತೆಗೆ ನೇರವಾಗಿ ಸಂದಾಯವಾಯಿತು.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು #PMKisanSammanNidhiYojan ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಆರ್ಥಿಕ ಸಹಾಯ ಒದಗಿಸುವ ಕೇಂದ್ರ ಸರ್ಕಾರದ ಯೋಜನೆಯಾಗಿದೆ. ಇದರ ಅಡಿಯಲ್ಲಿ ಅರ್ಹ ರೈತರಿಗೆ ವಾರ್ಷಿಕ ವಾರ್ಷಿಕ 6,000 ರೂ.ಗಳನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ ಎರಡು ಸಾವಿರದಂತೆ ಮೂರು ಕಂತುಗಳಲ್ಲಿ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.

ಭಾರತದ ಆರ್ಥಿಕತೆಯ ನಿರ್ಣಾಯಕ ಭಾಗವೆಂದರೆ ಕೃಷಿ ಮತ್ತು ರೈತರು ಸಮಾಜದ ಪ್ರಮುಖ ವಿಭಾಗಗಳಲ್ಲಿ ಒಬ್ಬರು. ಅದಾಗಿಯೂ ದೇಶದಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳ ನಡುವೆ ಪ್ರಚಲಿತದಲ್ಲಿರುವ ಸಾಮಾಜಿಕ ಆರ್ಥಿಕ ಅಸಮಾನತೆಗಳಿಂದಾಗಿ ರೈತ ಸಮುದಾಯಗಳು ರೈತ ಸಮುದಾಯಗಳು ಹೆಚ್ಚಾಗಿ ಆರ್ಥಿಕ ನಷ್ಟದೊಂದಿಗೆ ಹೋರಾಡುತ್ತಿವೆ. ಈ ಸಮುದಾಯಗಳಿಗೆ ಸಹಾಯ ಮಾಡಲು ಭಾರತ ಸರ್ಕಾರವು 2019ರಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಪ್ರಾರಂಭಿಸಿತು.
ಈ ಯೋಜನೆಯ ಲಾಭವನ್ನು ಪಡೆಯಲು ಸಣ್ಣ ಮತ್ತು ಅತಿ ಸಣ್ಣ ರೈತರು ಹಾಗೂ ಸಾಗುವಳು ಭೂಮಿಯನ್ನು ಹೊಂದಿರುವ ರೈತ ಕುಟುಂಬಗಳು ಈ ಯೋಜನೆಯನ್ನು ಪಡೆಯಬಹುದು. ಈ ಯೋಜನೆ ಈ ಯೋಜನೆಯ ಮೂಲಕ ಇದುವರೆಗೆ 20 ಕಂತುಗಳಲ್ಲಿ 3.70 ಲಕ್ಷ ಕೋಟಿ ರೂ.ಗಳನ್ನು 11 ಕೋಟಿ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗಿದೆ.
ಕೃಷಿವಿಜ್ಞಾನ ಕೇಂದ್ರ, ಶಿವಮೊಗ್ಗದಲ್ಲಿ ಈ ದಿನದ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಸುಮಾರು 150 ರಿಂದ 200 ರೈತರು ಭಾಗವಹಿಸಿ ಮಾಹಿತಿಯನ್ನು ಪಡೆದುಕೊಂಡರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post