ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ಕೊರೋನಾ ಸಂಕಷ್ಟದಿಂದ ಕಂಗೆಟ್ಟಿರುವ ಗ್ರಾಮೀಣ ಭಾಗದ ಜನರ ನೆರವಿಗೆ ಧಾವಿಸಿರುವ ಕೇಂದ್ರ ಸರ್ಕಾರ ಇದಕ್ಕಾಗಿ 50 ಸಾವಿರ ಕೋಟಿ ರೂ. ಮೊತ್ತದ ಯೋಜನೆ ಘೋಷಣೆ ಮಾಡಿದೆ.
ಈ ಕುರಿತಂತೆ ಗರೀಬ್ ಕಲ್ಯಾಣ್ ರೋಜ್ಗಾರ್ ಅಭಿಯಾನ್ ಯೋಜನೆಯನ್ನು ಘೋಷಣೆ ಮಾಡಿ, ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕೊರೋನಾ ಸಂಕಷ್ಟದಿಂದಾಗಿ ಲಕ್ಷಾಂತರ ಕಾರ್ಮಿಕರು ಗ್ರಾಮೀಣ ಭಾಗಗಳಿಗೆ ವಲಸೆ ಹೋಗುತ್ತಿದ್ದಾರೆ. ಅವರಿಗೆಲ್ಲ ಉದ್ಯೋಗ ಸೃಷ್ಠಿಸಿ, ಜೀವನೋಪಾಯ ಕಲ್ಪಿಸುವ ಉದ್ದೇಶದಿಂದ ಈ ಯೋಜನೆ ಘೋಷಣೆ ಮಾಡಿದ್ದೇವೆ ಎಂದರು.
ಬಿಹಾರದ ಖಗರಿಯಾ ಜಿಲ್ಲೆಯ ತೆಲಿಹಾರ್ ಗ್ರಾಮದಿಂದ ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರ ಉಪಸ್ಥಿತಿಯಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಧಾನಿಯವರು ಈ ಯೋಜನೆಗೆ ಚಾಲನೆ ನೀಡಿದರು.
6 ರಾಜ್ಯಗಳ 116 ಜಿಲ್ಲೆಗಳಲ್ಲಿ 125 ದಿನಗಳ ಅಭಿಯಾನವು ವಲಸೆ ಕಾರ್ಮಿಕರಿಗೆ ಸಹಾಯ ಮಾಡಲು ಮಿಷನ್ ಮೋಡ್‌ನಲ್ಲಿ ಕೆಲಸ ಮಾಡುವ ಗುರಿಯನ್ನು ಈ ಯೋಜನೆ ಹೊಂದಿದೆ. ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಜಾರ್ಖಂಡ್ ಮತ್ತು ಒಡಿಶಾದಾದ್ಯಂತ 116 ಜಿಲ್ಲೆಗಳನ್ನು ಒಳಗೊಂಡಿದ್ದು, ಲಾಕ್ ಡೌನ್ ಸಮಯದಲ್ಲಿ ಈ ಎಲ್ಲಾ ಜಿಲ್ಲೆಗಳಲ್ಲಿ 25 ಸಾವಿರಕ್ಕೂ ಹೆಚ್ಚು ವಲಸೆ ಕಾರ್ಮಿಕರನ್ನು ಈ ಯೋಜನೆಯ ಅಡಿಯಲ್ಲಿ ಪರಿಗಣಿಸಲಾಗುತ್ತದೆ.
Get In Touch With Us info@kalpa.news Whatsapp: 9481252093
Discussion about this post