ನವದೆಹಲಿ: ನಮ್ಮ ಐದು ವರ್ಷಗಳ ಆಡಳಿತ ಹಾಗೂ ಸಾಧನೆಯ ಬಗ್ಗೆ ನಮಗೆ ತೃಪ್ತಿಯಿದೆ. ಹೀಗಾಗಿ, ಪೂರ್ಣ ಬಹುಮತದೊಂದಿಗೆ ಮತ್ತೆ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದೇಶದಲ್ಲಿ ಕೊನೆಯ ಹಂತದ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ ಬಿದ್ದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರು ಬಿಜೆಪಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಕಳೆದ 2 ಚುನಾವಣೆಗಳ ಸಂದರ್ಭ ಐಪಿಎಲ್ ನಡೆಸಲು ಸಾಧ್ಯವಾಗಿರಲಿಲ್ಲ. ಬಲಿಷ್ಠ ಸರ್ಕಾರವಿದ್ದಾಗ ಐಪಿಎಲ್, ರಮ್ಜಾನ್, ಪರೀಕ್ಷೆಗಳು ಮತ್ತು ಇತರ ಹಲವು ಕಾರ್ಯಗಳನ್ನು ಶಾಂತಿಯುತವಾಗಿ, ವ್ಯವಸ್ಥಿತವಾಗಿ ನಡೆಸಲು ಸಾಧ್ಯವಾಯಿತು. ದೀರ್ಘ ಕಾಲದ ಬಳಿಕ ಸತತ ಎರಡನೆಯ ಅವಧಿಗೆ ಸರ್ಕಾರವೊಂದು ಮತ್ತೆ ಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬರುತ್ತಿರುವುದು ಇದೇ ಮೊದಲು. ನನಗೆ ದೊರೆತ ಬೆಂಬಲದಿಂದ ಮನಸ್ಸು ತುಂಬಿ ಬಂದಿದೆ. ನನಗೆ ತೋರಿದ ಪ್ರೀತಿ ಮತ್ತು ಬೆಂಬಲಕ್ಕಾಗಿ ದೇಶದ ಜನತೆಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
LIVE: Shri @AmitShah is addressing a press conference in the presence of PM Shri @narendramodi at BJP HQ. #DeshKaGauravModi https://t.co/PyeR1mudj9
— BJP (@BJP4India) May 17, 2019
ನಾನು ಯಾವುದೇ ಪ್ರಶ್ನೆಗೆ ಉತ್ತರಿಸುವುದಿಲ್ಲ. ಯಾಕೆಂದರೆ ಪತ್ರಿಕಾಗೋಷ್ಠಿಯನ್ನು ಶಾ ನಡೆಸಿಕೊಡಲಿದ್ದಾರೆ. ಇದು ಬಿಜೆಪಿಯ ವ್ಯವಸ್ಥೆ. ಶಿಸ್ತನ್ನು ನಾವು ಅನುಸರಿಸಬೇಕಾಗಿದೆ ಎಂದು ಮೋದಿ ಹೇಳಿದರು. ನಾವು ಪಕ್ಷದ ಶಿಸ್ತಿನ ಸಿಪಾಯಿಗಳು ಎಂದು ಮೋದಿ ಹೇಳಿದರು. ಪತ್ರಕರ್ತರ ಪ್ರಶ್ನೆಗೆ ಅಮಿತ್ ಶಾ ಅವರೇ ಉತ್ತರಿಸಿದರು.
ದೀರ್ಘಕಾಲದ ಬಳಿಕ ಸತತ ಎರಡನೇ ಅವಧಿಗೆ ಸರ್ಕಾರವೊಂದು ಮತ್ತೆ ಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬರುತ್ತಿರುವುದು ಇದೇ ಮೊದಲು. ನನಗೆ ದೊರೆತ ಬೆಂಬಲದಿಂದ ಮನಸ್ಸು ತುಂಬಿ ಬಂದಿದೆ. ನನಗೆ ತೋರಿದ ಪ್ರೀತಿ ಮತ್ತು ಬೆಂಬಲಕ್ಕಾಗಿ ದೇಶದ ಜನತೆಗೆ ಕೃತಜ್ಞತೆ ಸಲ್ಲಿಸುತ್ತೇನೆ. ನಮ್ಮ ಪ್ರಜಾಪ್ರಭುತ್ವದ ಶಕ್ತಿ ಜಗತ್ತಿಗೇ ತಿಳಿದಿದೆ. ಜಗತ್ತಿನ ಮೇಲೆ ಪ್ರಭಾವ ಬೀರುವ ಶಕ್ತಿ ಭಾರತಕ್ಕಿದೆ ಎಂದರು.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮಾತನಾಡಿ, ಎನ್’ಡಿಎ ಸರ್ಕಾರ ಪ್ರತಿ 15 ದಿನಗಳಿಗೊಂದು ಹೊಸ ಯೋಜನೆಯನ್ನು ಪ್ರಕಟಿಸಿದ್ದು, ಕಳೆದ ಐದು ವರ್ಷಗಳಲ್ಲಿ ಮೋದಿ ಸರ್ಕಾರ ಸಮಾಜದ ದುರ್ಬಲ ವರ್ಗದ ಅಭಿವರದ್ಧಿಗೆ 133 ಯೋಜನೆಗಳನ್ನು ಜಾರಿಗೆ ತಂದಿದೆ. ಮೋದಿ ಆಡಳಿತದಲ್ಲಿ ಬೆಲೆ ಏರಿಕೆ ಮತ್ತು ಭ್ರಷ್ಟಾಚಾರಕ್ಕೆ ಆಸ್ಪದವೇ ಇಲ್ಲ. ಮೋದಿ ಸರ್ಕಾರದಲ್ಲಿ ದೇಶದ ಜನತೆ ಸುರಕ್ಷಿತ ಭಾವನೆ ಹೊಂದಿದ್ದಾರೆ ಎಂದರು.
Discussion about this post