ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಬೆಲೆ ಏರಿಕೆಯಿಂದಾಗಿ ಕಂಗಾಲಾಗಿರುವ ದೇಶವಾಸಿಗಳಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟಿರುವ ಪ್ರಧಾನಿ ನರೇಂದ್ರ ಮೋದಿ #PMNarendraModi ನೇತೃತ್ವದ ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ #LPGPrice ಬೆಲೆಯಲ್ಲಿ ಭಾರೀ ಇಳಿಕೆ ಮಾಡಲು ನಿರ್ಧರಿಸಿದೆ.
ಈ ಕುರಿತಂತೆ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದ್ದು, ಬೆಲೆ ಏರಿಕೆಯಿಂದ ಕಂಗಾಲಾಗಿರುವ ಗ್ರಾಹಕರಿಗೆ ಪರಿಹಾರ ನೀಡಲು ಕೇಂದ್ರ ಸರ್ಕಾರವು ಉಜ್ವಲ ಯೋಜನೆಯಡಿ 14 ಕೆಜಿ ಎಲ್’ಪಿಜಿ #LPG ಸಿಲಿಂಡರ್ ಬೆಲೆಯನ್ನು 200 ರೂ. ಕಡಿತಗೊಳಿಸಲು ನಿರ್ಧರಿಸಿದೆ.
ಪ್ರಸ್ತುತ, 14 ಕೆಜಿ ಎಲ್’ಪಿಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ 1053 ರೂ, ಮುಂಬೈನಲ್ಲಿ 1052.50 ರೂ, ಚೆನ್ನೈನಲ್ಲಿ #Chennai 1068.50 ರೂ ಮತ್ತು ಕೋಲ್ಕತ್ತಾದಲ್ಲಿ #Kolkata 1079 ರೂ. ಇದೆ.
ತೈಲ ಕಂಪನಿಗಳು ಜುಲೈನಲ್ಲಿ ಗೃಹಬಳಕೆಯ ಎಲ್’ಪಿಜಿ ಸಿಲಿಂಡರ್ ಬೆಲೆಯನ್ನು 50 ರೂ. ಈ ಹಿಂದೆ ಮೇ ತಿಂಗಳಲ್ಲಿ ಎರಡು ಬಾರಿ ಬೆಲೆ ಏರಿಕೆ ಮಾಡಲಾಗಿತ್ತು.
ಪ್ರಧಾನ ಮಂತ್ರಿ ಉಜ್ವಲ ಯೋಜನೆ #PradhanMantriUjwalaYojana ಅನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ಮೇ 1 2016 ರಂದು ಬಡತನ ರೇಖೆಗಿಂತ #BPL ಕೆಳಗಿರುವ ಕುಟುಂಬಗಳ ಮಹಿಳೆಯರಿಗೆ 50 ಮಿಲಿಯನ್ ಎಲ್’ಪಿಜಿ ಸಂಪರ್ಕಗಳನ್ನು ವಿತರಿಸಲು ಪ್ರಾರಂಭಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post