ನವದೆಹಲಿ: ವಾರಣಾಸಿಯಿಂದ ಲೋಕಸಭೆಗೆ ಆಯ್ಕೆಯಾಗಿರುವ ನರೇಂದ್ರ ಮೋದಿ ಇಂದು ಸಂಸತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು.
17ನೆಯ ಲೋಕಸಭೆಯ ಮೊದಲ ಅಧಿವೇಶನ ಇಂದು ಆರಂಭವಾಗಿದ್ದು, ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಎಲ್ಲ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು.
PM @narendramodi takes oath as #LokSabha MP pic.twitter.com/G9JhsoiWwm
— Doordarshan News (@DDNewsLive) June 17, 2019
ನೂತನ ಹಂಗಾಮಿ ಸ್ಪೀಕರ್ ಆಗಿ ಆಯ್ಕೆಯಾಗಿರುವ ವೀರೇಂದ್ರ ಕುಮಾರ್ ಅವರು ನೂತನ ಸಂಸದರಿಗೆ ಪ್ರಮಾಣ ವಚನ ಬೋಧಿಸಿದರು.
Union Minister @rajnathsingh takes oath of office pic.twitter.com/xT1Rn6HBum
— Doordarshan News (@DDNewsLive) June 17, 2019
ನೂತನ ಸಂಸದರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಎರಡು ದಿನ ನಡೆಯಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ರವಿಶಂಕರ್ ಪ್ರಸಾದ್, ಸ್ಮೃತಿ ಇರಾನಿ ಮತಿತ್ತರರು ಪ್ರಮಾಣ ವಚನ ಸ್ವೀಕರಿಸಿದರು.
Union Minister @nitin_gadkari takes oath of office as MP of 17th #LokSabha pic.twitter.com/e48fUvUwna
— Doordarshan News (@DDNewsLive) June 17, 2019
ಜೂನ್ 19 ರಂದು ಲೋಕಸಭೆಯ ಸ್ಪೀಕರ್ ಚುನಾವಣೆ ನಡೆಯಲಿದ್ದು, ಜೂನ್ 20 ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ. ಜುಲೈ 5 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೂತನ ಸರ್ಕಾರದ ಬಜೆಟ್ ಮಂಡಿಸಲಿದ್ದಾರೆ.
ಹಂಗಾಮಿ ಸ್ಪೀಕರ್ ಆಗಿ ವೀರೇಂದ್ರ ಕುಮಾರ್:
ಏಳು ಬಾರಿ ಸಂಸದರಾಗಿ ಆಯ್ಕೆಯಾಗಿರುವ ವೀರೇಂದ್ರ ಕುಮಾರ್ ಅವರನ್ನು ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಆಯ್ಕೆ ಮಾಡಲಾಗಿದ್ದು, ಇವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.
President Kovind administered the Oath of Office to Dr Virendra Kumar as Pro-tem Speaker of the 17th Lok Sabha, at a ceremony held at Rashtrapati Bhavan pic.twitter.com/vjlFGcndav
— President of India (@rashtrapatibhvn) June 17, 2019
Discussion about this post