ನವದೆಹಲಿ: ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಯವರ ಅಂತಿಮ ದರ್ಶನ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಕೇಂದ್ರ ಸಚಿವರು ತುಮಕೂರಿಗೆ ಭೇಟಿ ನೀಡಲಿದ್ದಾರೆ.
ನಾಳೆ ಮುಂಜಾನೆ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ, ಶ್ರೀಗಳ ಅಂತಿಮ ದರ್ಶನ ಪಡೆಯಲಿದ್ದಾರೆ. ಪ್ರಧಾನಿಯವರೊಂದಿಗೆ ಸಚಿವ ಪಿಯೂಷ್ ಗೋಯಲ್ ಸೇರಿದಂತೆ ಹಲವು ಕೇಂದ್ರ ಸಚಿವರು ಭೇಟಿ ನೀಡಲಿದ್ದಾರೆ.
ಇನ್ನು, ಇಂದು ರಾತ್ರಿ ವೇಳೆ ಅಂತಿಮ ದರ್ಶನ ಪಡೆಯಲು ಬಿಜೆಪಿ ರಾಷ್ಟಾಧ್ಯಕ್ಷ ಅಮಿತ್ ಶಾ ಸಿದ್ದಗಂಗಾ ಮಠಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ.
Discussion about this post