ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ |
ಬಾಲಕಿಯರಿಗೆ ಲೈಂಗಿಕ ದೌರ್ಜನ್ಯದ ಪೊಕ್ಸೋ ಪ್ರಕರಣಕ್ಕೆ ಸಂಬAಧಿಸಿದAತೆ ಚಿತ್ರದುರ್ಗ ಮುರುಘಾ ಮಠದ ಡಾ.ಶಿವಮೂರ್ತಿ ಸ್ವಾಮೀಜಿಯವರನ್ನು ಪೊಲೀಸರು ಬಂಧಿಸಿದ್ದಾರೆ.
ಪೊಕ್ಸೋ ಪ್ರಕರಣ ದಾಖಲಾಗಿ 150 ಗಂಟೆಗಳ ನಂತರ ಮಠದಿಂದಲೇ ಸ್ವಾಮೀಜಿಯವರನ್ನು ಬಂಧಿಸಲಾಗಿದ್ದು, ಡಿವೈಎಸ್’ಪಿ ಕಚೇರಿಗೆ ಕರೆದೊಯ್ದು ಆನಂತರ ರಾತ್ರಿಯೇ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುತ್ತದೆ ಎಂದು ವರದಿಯಾಗಿದೆ.
ಶ್ರೀಗಳಿಗೆ ಬಿಳಿಯ ಶಾಲು ಹೊದಿಸಿ, ಹಿಂಭಾಗಿಲಿನಿAದ ಪೊಲೀಸರು ಕರೆದುಕೊಂಡು ಹೋಗುತ್ತಿದ್ದು, ಇಂದು ರಾತ್ರಿಯೇ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುತ್ತದೆ ಎಂದು ವರದಿಯಾಗಿದೆ.
ಇನ್ನೊಂದು ಮೂಲಗಳ ಪ್ರಕಾರ ಮಠದಿಂದ ಆಸ್ಪತ್ರೆಗೆ ಕರೆದೊಯ್ದು ಆರೋಗ್ಯ ತಪಾಸಣೆ ನಡೆಸಿದ ನಂತರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುತ್ತದೆ ಎಂದು ಹೇಳಲಾಗಿದೆ.
Also read: ಶಿವಮೊಗ್ಗದ ಮಹಿಳೆ ಅಮೆರಿಕದಲ್ಲಿ ಸಾವು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post