ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ #SexualAssault ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿರುವ ಸೇಕ್ರೆಡ್ ಹಾರ್ಟ್ ಕಾಲೇಜು ಪ್ರಾಂಶುಪಾಲ ಫ್ರಾನ್ಸಿಸ್ ಫರ್ನಾಂಡಿಸ್ #FrancisFernandes ಅವರ ಜಾಮೀನು ಅರ್ಜಿ ವಜಾಗೊಂಡಿದೆ.
ಫ್ರಾನ್ಸಿಸ್ ಅವರು ತಮಗೆ ಜಾಮೀನು #Bail ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಕುರಿತ ವಿಚಾರಣೆ ನಡೆಸಿರುವ 1ನೆಯ ಹೆಚ್ಚುವರಿ ಜಿಲ್ಲಾ ವಿಶೇಷ ಸತ್ರ ನ್ಯಾಯಾಲಯ(ಎಫ್’ಟಿಎಸ್’ಸಿ) ಅರ್ಜಿಯನ್ನು ವಜಾಗೊಳಿಸಿದೆ.
ಪ್ರಕರಣದಲ್ಲಿ ವಾದ ಮಂಡಿಸಿದ ಸರ್ಕಾರಿ ಅಭಿಯೋಜಕರಾದ ಬಿ.ಎಸ್. ಮಮತಾ ಅವರು ಆರೋಪಿಯ ಜಾಮೀನು ಅರ್ಜಿಯನ್ನು ತಿರಸ್ಕರಿಸುವಂತೆ ಮನವಿ ಮಾಡಿದ್ದರು. ಇದನ್ನು ಪುರಸ್ಕರಿಸಿದ ನ್ಯಾಯಾಧೀಶರಾದ ಲತಾ ಅವರು ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಾರೆ.
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಕೋಟೆ ಠಾಣೆಯಲ್ಲಿ ದಾಖಲಾಗಿದ್ದ ದೂರಿನ ಆಧಾರದಲ್ಲಿ ಪೋಕ್ಸೋ #POCSO ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಫ್ರಾನ್ಸಿಸ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಸದ್ಯ ಇವರು ನ್ಯಾಯಾಂಗ ಬಂಧನದಲ್ಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post