ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಾರ್ಕೆಟ್ ಗಿರಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಕುಖ್ಯಾತ ರೌಡಿ ಶೀಟರ್ ಮಾರ್ಕೆಟ್ ಲೋಕಿ ಮೇಲೆ ಶೂಟೌಟ್ ನಡೆಸಿರುವ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.
ಗಿರಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ತಲೆಮರೆಸಿಕೊಂಡಿದ್ದ ಲೋಕಿ ಬಂಧನಕ್ಕೆ ಬಲೆ ಬೀಸಲಾಗಿತ್ತು. ಹೊರರಾಜ್ಯದಲ್ಲಿ ಆತನನ್ನು ಬಂಧಿಸಲಾಗಿತ್ತು. ಅಬ್ಬಲಗೆರೆ ಬಳಿ ಸ್ಥಳ ಮಹಜರು ಮಾಡಲು ಕರೆದುಕೊಂಡು ಹೋಗಲಾಗಿತ್ತು. ಆದರೆ, ಆತ ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ ಪರಾರಿಯಾಗಲು ಯತ್ನಿಸಿದ ಹಿನ್ನೆಲೆಯಲ್ಲಿ ಆತನ ಮೇಲೆ ಫೈರಿಂಗ್ ನಡೆಸಲಾಗಿದೆ. ಈ ವೇಳೆ ಪೊಲೀಸರು ಹಾರಿಸಿದ ಗುಂಡ ಲೋಕಿಯ ಎಡಗಾಲಿಗೆ ತಗುಲಿ ಅಲ್ಲಿಯೇ ಬಿದ್ದಿದ್ದಾನೆ. ತತಕ್ಷಣವೇ ಆತನನ್ನು ವಶಕ್ಕೆ ಪಡೆದು ಮೆಗ್ಗಾನ್ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಗಿದೆ.
Get in Touch With Us info@kalpa.news Whatsapp: 9481252093
Discussion about this post