ಬೆಂಗಳೂರು: ಯಡಿಯೂರಪ್ಪ ವಿರುದ್ಧ ರಾಜ್ಯದ ಜನರು ದಂಗೆ ಏಳಬೇಕು ಎಂದು ಕರೆ ನೀಡಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಪೊಲೀಸ್ ಇಲಾಖೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಬೇಕು ಎಂದು ಬಿಜೆಪಿ ಮುಖಂಡ, ಪರಿಷತ್ ಸದಸ್ಯ ರವಿಕುಮಾರ್ ಒತ್ತಾಯಿಸಿದ್ದಾರೆ.
ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಸಿಎಂ ಕುಮಾರಸ್ವಾಮಿ ಅವರ ಕರೆಯ ಪ್ರೇರಣೆಯಿಂದ ಬಿಎಸ್‌ವೈ ನಿವಾಸದ ಮುಂದೆ ಪ್ರತಿಭಟನೆ ನಡೆದಿದೆ. ರಾಜ್ಯದಲ್ಲೇನು ಪೊಲೀಸ್ ವ್ಯವಸ್ತೆ ಇದೆಯೋ ಅಥವಾ ಸತ್ತಿದೆಯೋ ಎಂದು ಕಿಡಿ ಕಾರಿದ ಅವರು, ಗೃಹ ಸಚಿವರು ಈ ಬಗ್ಗೆ ಗಮನ ಹರಿಸಬೇಕು ಹಾಗೂ ಪೊಲೀಸ್ ಇಲಾಖೆ ದೂರು ದಾಖಲಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.
Discussion about this post