ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ #BYVijayendra ಅವರಿಗೆ ರಾಜ್ಯ ಸರ್ಕಾರ ಪೊಲೀಸ್ ಭದ್ರತೆ #PoliceSecurity ಹಾಗೂ ಬೆಂಗಾವಲು ವಾಹನವನ್ನು ಒದಗಿಸಿದೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ #BSYediyurappa ಅವರ ಪುತ್ರರೂ ಆಗಿರುವ ವಿಜಯೇಂದ್ರ ಅವರು, ರಾಜ್ಯ ಬಿಜೆಪಿ #Bjp ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ನಿನ್ನೆಯಿಂದಲೇ ಮೂವರು ಪೊಲೀಸ್ ಸಿಬ್ಬಂದಿಯಿರುವ ಬೆಂಗಾವಲು ವಾಹನವನ್ನು #PoliceEscort ತಾತ್ಕಾಲಿಕವಾಗಿ ಕಲ್ಪಿಸಿದೆ.
ವಿಜಯೇಂದ್ರ ಅವರು ಪದಗ್ರಹಣ ಮಾಡಿದ ನಂತರ ರಾಜ್ಯ ಸರ್ಕಾರ ಅಧಿಕೃತವಾಗಿ ಸಿಬ್ಬಂದಿ ಸಹಿತ ಬೆಂಗಾವಲು ವಾಹನ ಪಡೆಯನ್ನು ಕಲ್ಪಿಸಲಿದೆ.
ಬುಧವಾರ ನಡೆಯಲಿರುವ ಸಮಾರಂಭದಲ್ಲಿ ವಿಜಯೇಂದ್ರ ನೂತನ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ.
ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ನಿಯೋಜನೆಗೊಂಡ ನಂತರ ಅತ್ಯಂತ ಬಿರುಸಾಗಿ ಕಾರ್ಯ ನಿರ್ವಹಿಸುತ್ತಿರುವ ವಿಜಯೇಂದ್ರ, ಸಾಲು ಸಾಲಾಗಿ ಹಿರಿಯ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post