ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಪುತ್ತೂರು |
ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಸನಿಹಗೊಳ್ಳುತ್ತಿರುವಂತೆಯೇ ಪುತ್ತಿಲ ಪರಿವಾರದ ಮುಖ್ಯಸ್ಥ, ಪ್ರಬಲ ಹಿಂದೂ ಮುಖಂಡ ಅರುಣ್ ಪುತ್ತಿಲ ಬಿಜೆಪಿ ಸೇರುವುದು ಬಹುತೇಕ ನಿಶ್ಚಿತವಾಗಿದ್ದು, ಈ ಮೂಲಕ ತುಳುನಾಡಿಯಲ್ಲಿ ಕಮಲ ಪಾಳಯಕ್ಕೆ ಆನೆ ಬಲ ಬಂದಂತಾಗಿದೆ.
Also read: ಕಾಂತೇಶ್, ಪ್ರತಾಪ್ ಸಿಂಹಗೆ ಟಿಕೇಟ್ ಮಿಸ್ | ಸಂಸದ ರಾಘವೇಂದ್ರ ರಿಯಾಕ್ಷನ್
ಬಿಜೆಪಿ ಹಾಗೂ ಪುತ್ತಿಲ ಪರಿವಾರದ ನಡುವೆ ನಡೆದ ಮಾತುಕತೆ ಯಶಸ್ವಿಯಾಗಿದೆ. ಅರುಣ್ ಪುತ್ತಿಲ ಜೊತೆ ಬಿಜೆಪಿ ಕಚೇರಿಯಲ್ಲಿ ಹಲವು ಗಂಟೆಗಳ ಕಾಲ ನಡೆದ ಮಾತುಕತೆ ನಡೆದಿದ್ದು, ಕೊನೆಗೂ ಷರತ್ತು ರಹಿತವಾಗಿ ಬಿಜೆಪಿ ಬರಲು ಅರುಣ್ ಪುತ್ತಿಲ ಒಪ್ಪಿಗೆ ನೀಡಿದ್ದಾರೆ. ಪಾರ್ಟಿಗೆ ಬಂದ ಬಳಿಕ ಸ್ಥಾನಮಾನ ನೀಡಲು ಬಿಜೆಪಿ ನಾಯಕರ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಸೇರಿದಂತೆ ಪ್ರಮುಖರ ಸಮ್ಮುಖದಲ್ಲಿ ಇಂದು ರಾತ್ರಿಯೇ ಅಥವಾ ನಾಳೆ ಪುತ್ತಿಲ ಅವರು ಬಿಜೆಪಿಗೆ ಸೇರಲಿದ್ದಾರೆ ಎಂದು ವರದಿಯಾಗಿದೆ.

ಈಗಾಗಲೇ ಪುತ್ತಿಲ ಪರಿವಾರದ ಪ್ರಮುಖರಾದ ಅರುಣ್ ಪುತ್ತಿಲ, ಪ್ರಸನ್ನ ಮಾರ್ತಾ, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಸೇರಿದಂತೆ ಹಲವರು ಬೆಂಗಳೂರಿನಲ್ಲಿರುವ ಬಿಜೆಪಿ ರಾಜ್ಯ ಕಚೇರಿಗೆ ಬಂದಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಬಿಜೆಪಿಗೆ ಬಿಸಿ ಮುಟ್ಟಿಸಿದ್ದ ಪುತ್ತಿಲ ಅವರನ್ನು ಪಕ್ಷಕ್ಕೆ ಕರೆತರುವ ಪ್ರಯತ್ನಗಳು ಹಲವು ದಿನಗಳಿಂದ ನಡೆಯುತ್ತಿತ್ತು. ಈಗ ಅದಕ್ಕೊಂದು ತಾರ್ಕಿಕ ಅಂತ್ಯಕ್ಕೆ ಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post