No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Sunday, October 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

Political | ಸರ್ಕಾರಕ್ಕೆ ರೈತರಿಗಿಂತ ರಿಯಲ್ ಎಸ್ಟೇಟ್ ಮುಖ್ಯ | ವಿಜಯೇಂದ್ರ ಟೀಕೆ

kalpa News by kalpa News
July 21, 2026
in ಶಿವಮೊಗ್ಗ
0
political govt-ignoring farmers focused on real estate
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |        

ರಾಜ್ಯದಲ್ಲಿ (Political News) ತಲೆದೋರಿರುವ ತೀವ್ರ ಬರ ಪರಿಸ್ಥಿತಿ, ರೈತರ ಸಂಕಷ್ಟ, ಎಸ್‌ಐಆರ್‌ (SIR) ಮಹಾ ಸಂಪರ್ಕ ಅಭಿಯಾನ, ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿನ ಗೊಂದಲ, ನೀಟ್ ಪರೀಕ್ಷೆ ವಿವಾದ, ಬಿಡದಿ ಟೌನ್‌ಶಿಪ್ ಹಾಗೂ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ಸೇರಿದಂತೆ ಹಲವು ವಿಷಯಗಳ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B Y Vijayendra) ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಇಂದು ಶಿವಮೊಗ್ಗ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಜನಪರ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.

ರೈತರ ಸಂಕಷ್ಟದ ಸಂದರ್ಭದಲ್ಲಿ ಸಚಿವರು ಜನರ ಮಧ್ಯೆ ಹೋಗದೆ ಬೆಂಗಳೂರಿನಲ್ಲೇ ಸಭೆಗಳಿಗೆ ಸೀಮಿತರಾಗಿದ್ದಾರೆ ಎಂದು ಟೀಕಿಸಿದರು.

ಮತದಾರರ ಪಟ್ಟಿಗೆ ಸಂಬಂಧಿಸಿದ ಜಾಗೃತಿ

ರಾಜ್ಯಾದ್ಯಂತ ಜುಲೈ 25 ಮತ್ತು 26ರಂದು ಬಿಜೆಪಿ ವತಿಯಿಂದ “ಎಸ್‌ಐಆರ್‌ ಮಹಾ ಸಂಪರ್ಕ ಅಭಿಯಾನ” ಹಮ್ಮಿಕೊಳ್ಳಲಾಗುತ್ತಿದೆ ಎಂದು ಘೋಷಿಸಿದ ಅವರು, ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಜನಪ್ರತಿನಿಧಿಗಳು ಹಾಗೂ ಲಕ್ಷಾಂತರ ಬಿಜೆಪಿ ಕಾರ್ಯಕರ್ತರು ಮನೆ-ಮನೆಗೆ ಭೇಟಿ ನೀಡಿ ಸುಮಾರು ಒಂದು ಕೋಟಿ ಕುಟುಂಬಗಳನ್ನು ಸಂಪರ್ಕಿಸಲಿದ್ದಾರೆ ಎಂದರು.

ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ರೈತರ ಸಮಸ್ಯೆಗಳಿಗಿಂತ ರಿಯಲ್ ಎಸ್ಟೇಟ್ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ ಎಂದು ಆರೋಪಿಸಿದ ವಿಜಯೇಂದ್ರ, “ರಿಯಲ್ ಎಸ್ಟೇಟ್ ಬಗ್ಗೆ ತೋರಿಸುವ ಕಾಳಜಿಯಷ್ಟೇ ರೈತರ ಬದುಕಿನ ಮೇಲೂ ತೋರಿಸಿ” ಎಂದು ಸಲಹೆ ನೀಡಿದರು.

ಮತದಾರರ ಪಟ್ಟಿಯ ಪರಿಷ್ಕರಣೆಗೆ ಸಂಬಂಧಿಸಿದ ಎನ್ಯುಮರೇಷನ್ (Enumeration) ಫಾರ್ಮ್ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಗುವುದು. ಫಾರ್ಮ್ ಭರ್ತಿ ಮಾಡುವ ವಿಧಾನವನ್ನು ವಿವರಿಸುವುದರ ಜೊತೆಗೆ, ಯಾವುದೇ ಸಮಸ್ಯೆಗಳಿದ್ದರೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು. ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರು ಕನಿಷ್ಠ 20 ಮನೆಗಳಿಗೆ ಭೇಟಿ ನೀಡಿ ಜನಜಾಗೃತಿ ಮೂಡಿಸಬೇಕು ಎಂಬ ಗುರಿ ನಿಗದಿಪಡಿಸಲಾಗಿದೆ ಎಂದರು.

ರಾಜ್ಯದಲ್ಲಿ ಮಳೆಯ ಕೊರತೆಯಿಂದ ರೈತರು ಸಂಕಷ್ಟದಲ್ಲಿದ್ದರೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವರು ಜಿಲ್ಲೆಗಳಿಗೆ ಭೇಟಿ ನೀಡದೇ ಕೇವಲ ವೀಡಿಯೋ ಕಾನ್ಫರೆನ್ಸ್‌ಗಳಿಗೆ ಸೀಮಿತರಾಗಿದ್ದಾರೆ ಎಂದು ವಿಜಯೇಂದ್ರ ಟೀಕಿಸಿದರು. ಮುಖ್ಯಮಂತ್ರಿಗಳು ಪ್ರಧಾನಮಂತ್ರಿಗೆ ಪತ್ರ ಬರೆದು ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ಮೊದಲು ರಾಜ್ಯ ಸರ್ಕಾರವೇ ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.

ಬಿತ್ತನೆ ಮಾಡದ ರೈತರು ಮಾತ್ರವಲ್ಲ, ಬಿತ್ತನೆ ಮಾಡಿದ ರೈತರೂ ಮಳೆಯಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರ ತಕ್ಷಣ ಬರ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.
ಹಿಂದೆ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ನೆರೆ ಹಾವಳಿಯ ಸಂದರ್ಭದಲ್ಲಿ ತಕ್ಷಣ ಪರಿಹಾರ ಒದಗಿಸಿದ್ದನ್ನು ಸರ್ಕಾರ ಮಾದರಿಯಾಗಿಟ್ಟುಕೊಳ್ಳಬೇಕು ಎಂದರು.

ಎರಡನೇ ವಿಮಾನ ನಿಲ್ದಾಣ: ತುಮಕೂರಿಗೆ ಬೆಂಬಲ

ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣವನ್ನು ಕನಕಪುರ ಭಾಗದಲ್ಲಿ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತಪಡಿಸಿದ ಅವರು, ತುಮಕೂರು ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಿಸಿದರೆ ಚಿತ್ರದುರ್ಗ, ತುಮಕೂರು, ದಾವಣಗೆರೆ, ವಿಜಯನಗರ, ಕೊಪ್ಪಳ ಸೇರಿದಂತೆ ಹಲವು ಜಿಲ್ಲೆಗಳ ಅಭಿವೃದ್ಧಿಗೆ ವೇಗ ಸಿಗುತ್ತದೆ ಎಂದು ಹೇಳಿದರು.

Also read: Shivamogga Murder Case Cracked Quickly, Two Arrested

ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳ ಅನುಷ್ಠಾನದಲ್ಲಿ ಗೊಂದಲ ಉಂಟಾಗಿದೆ ಎಂದು ಆರೋಪಿಸಿದ ಅವರು, ಹೊಸ ಅರ್ಜಿ ಸಲ್ಲಿಕೆ, ಹೊಸ ಷರತ್ತುಗಳು ಹಾಗೂ ವಿಳಂಬದ ಮೂಲಕ ಸರ್ಕಾರ ತನ್ನ ಆರ್ಥಿಕ ಸಂಕಷ್ಟವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ ಎಂದು ಟೀಕಿಸಿದರು.

ಈ ಎಲ್ಲಾ ವಿಚಾರಗಳನ್ನು ಆಗಸ್ಟ್‌ನಲ್ಲಿ ನಡೆಯಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಬಿಜೆಪಿ ಪ್ರಬಲವಾಗಿ ಪ್ರಸ್ತಾಪಿಸಲಿದೆ ಎಂದು ಅವರು ತಿಳಿಸಿದರು.

Political News | Govt Ignoring Farmers, Focused on Real Estate: Vijayendra

Shivamogga: BJP State President B.Y. Vijayendra launched a sharp attack on the Congress-led Karnataka government over a range of issues, including the severe drought situation, farmers’ distress, confusion in the implementation of guarantee schemes, the NEET controversy, the Bidadi township project, and the proposed second Bengaluru airport.JNNCE Shivamogga

SIR Mass Outreach Campaign Announced

Vijayendra announced that the BJP will organise a statewide “SIR Mass Outreach Campaign” on July 25 and 26. Party MPs, MLAs, MLCs, former representatives, and lakhs of workers will visit households across all Assembly constituencies, aiming to reach nearly one crore families.

Awareness on Voter List Enumeration

He said the campaign will also focus on creating awareness about the enumeration form related to voter list revision. Workers will guide citizens on how to fill out the forms and attempt to resolve issues on the spot. Each BJP worker has been assigned a target of visiting at least 20 households.

Criticism Over Drought Management

Criticising the government’s handling of the drought, Vijayendra alleged that despite farmers facing severe distress due to lack of rainfall, the Chief Minister and ministers have not visited districts and are confined to video conferences. He urged the government to take immediate drought management measures.Kalahamsa Infotech private limited

Call to Prioritise Farmers’ Issues

He stressed that both farmers who have sown crops and those who could not are suffering due to poor rainfall. Writing letters to the Prime Minister is not enough, he said, and the state government must take responsibility and address farmers’ grievances directly.

Allegations of Focus on Real Estate

Vijayendra accused the Chief Minister and Deputy Chief Minister of giving more importance to real estate projects than to farmers’ welfare. He urged the government to show the same concern for farmers’ livelihoods.

Opposition to Second Airport Location

He opposed the proposal to build Bengaluru’s second airport in the Kanakapura region, stating that establishing it in Tumakuru would boost development in districts like Chitradurga, Tumakuru, Davanagere, Vijayanagara, and Koppal.

Confusion Over Guarantee Schemes

The BJP leader alleged that the state government has created confusion in the implementation of schemes such as Gruha Lakshmi and Gruha Jyothi. Introducing new application processes, conditions, and delays is an attempt to cover up financial difficulties, he said.

Issues to be Raised in Assembly

Vijayendra said the BJP will strongly raise all these issues in the upcoming Legislative Assembly session scheduled for August.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:  Whatsapp: 9008761663, 9481252093 – info@kalpa.news     Kalpa News Advertising Disclaimer

Tags: B Y VijayendraBidadi Township PlanKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsSIRಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

Vande Mataram | ವಂದೇ ಮಾತರಂ ಅವಮಾನಕ್ಕೆ ಜೈಲು ಶಿಕ್ಷೆ? ಕೇಂದ್ರದ ಹೊಸ ಪ್ರಸ್ತಾಪ

Next Post

Shivamogga | ಪ್ರತಿಭಟನೆ ಹೆಸರಿನಲ್ಲಿ ಅರಾಜಕತೆ | ವಿಜಯೇಂದ್ರ ಖಂಡನೆ

kalpa News

kalpa News

Next Post
shivamogga vijayendra praises centre on neet

Shivamogga | ಪ್ರತಿಭಟನೆ ಹೆಸರಿನಲ್ಲಿ ಅರಾಜಕತೆ | ವಿಜಯೇಂದ್ರ ಖಂಡನೆ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL