ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ವಕ್ತಾರರನ್ನಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತಂತೆ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ನೇಮಕಾತಿ ಆದೇಶ ಹೊರಡಿಸಿದ್ದಾರೆ.
ವಾರ ಭವಿಷ್ಯ: ನಿಖರ ಜ್ಯೋತಿಷಿ ಶ್ರೀ ನಾರಾಯಣ ಭಟ್ ಅವರಿಂದ: 20.09.2020 ರಿಂದ 26.09.2020
ಕಿಮ್ಮನೆ ರತ್ನಾಕರ್ ನಲವತ್ತು ವರ್ಷಗಳಿಂದ ಹೆಚ್ಚಿನ ಅವಧಿಯಲ್ಲಿ ವಕೀಲರಾಗಿ ಸೇವೆ ಸಲ್ಲಿಸಿದ್ದು, ಹತ್ತು ವರ್ಷಗಳ ಕಾಲ ಶಾಸಕರಾಗಿಯೂ, ಶಿಕ್ಷಣ ಸಚಿವರಾಗಿಯೂ ಅನುಭವವನ್ನು ಹೊಂದಿದ್ದಾರೆ.
ಕಾನೂನು ರಾಜ್ಯದ ಸ್ಥಿತಿಗತಿಗಳ ಬಗ್ಗೆ ವಿಶೇಷವಾದ ಪರಿಣತಿಯನ್ನು ಹೊಂದಿರುವುದನ್ನು ಪರಿಗಣಿಸಿ ಈ ಹುದ್ದೆಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
Get In Touch With Us info@kalpa.news Whatsapp: 9481252093
Discussion about this post