ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸೊರಬ: ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸುತ್ತಿರುವ ಅಂಗವಾಗಿ ಶ್ರೀ ರಾಮ ಮಂದಿರ ಶಿಲಾನ್ಯಾಸ ಉತ್ಸವ ಆಚರಣಾ ಸಮಿತಿಯಿಂದ ಆ. 5ರಂದು ಪಟ್ಟಣದ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಮಧುರಾಯ್ ಜಿ. ಶೇಟ್ ಹೇಳಿದರು.
ಪಟ್ಟಣದ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಅಸಂಖ್ಯಾತ ಹಿಂದೂಗಳ ಬಹು ನಿರೀಕ್ಷಿತ ಶ್ರೀ ರಾಮ ಮಂದಿರ ನಿರ್ಮಾಣದ ಭೂಮಿ ಪೂಜಾ ಕಾರ್ಯಕ್ರಮ ಆಯೋಧ್ಯಾ ನಗರದ ಸರಯೂ ನದಿಯ ತೀರದಲ್ಲಿ ಅಂದು ಪ್ರಧಾನಿ ಮೋದಿ ನೆರವೇರಿಸುತ್ತಿದ್ದು, ಈ ಶುಭ ಸಂದರ್ಭದಲ್ಲಿ ಪಟ್ಟಣದ ಶ್ರೀ ಸೀತಾರಾಮ ಚಂದ್ರ ದೇವಸ್ಥಾನದಲ್ಲಿ ಬೆಳಗ್ಗೆ 6ಕ್ಕೆ ಶ್ರೀ ರಾಮ ತಾರಕ ಹೋಮ, ವಿಶೇಷ ಪಂಚಾಮೃತ ಅಭಿಷೇಕ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜಡೆ ಸಂಸ್ಥಾನ ಮಠದ ಶ್ರೀ ಮಹಾಂತ ಸ್ವಾಮೀಜಿ ಅವರ ನೇತೃತ್ವದಲ್ಲಿ ಜರುಗಲಿವೆ. ಜೊತೆಗೆ ಕರ ಸೇವಕರನ್ನು ಗುರುತಿಸಿ ಸನ್ಮಾನಿಸಲಾಗುವುದು ಎಂದರು.

ಸಮಿತಿಯ ಪ್ರಧಾನ ಕಾರ್ಯದರ್ಶಿ ಆಶಿಕ್ ನಾಗಪ್ಪ, ಸಂಚಾಲಕ ಮಹೇಶ್ ಖಾರ್ವಿ, ಸಹ ಸಂಚಾಲಕರಾದ ನಟರಾಜ ಉಪ್ಪಿನ, ಸಂಜೀವ್ ಆಚಾರ್, ಭಜರಂಗದಳದ ಜಿಲ್ಲಾ ಸಹ ಸಂಚಾಲಕ ರವಿ ಜೆ. ಗುಡಿಗಾರ್, ಯುವಾ ಬ್ರಿಗೇಡ್‍ನ ಮಂಜು ಇದ್ದರು.
(ವರದಿ: ಮಧುರಾಮ್, ಸೊರಬ)
Get In Touch With Us info@kalpa.news Whatsapp: 9481252093





Discussion about this post