ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ದಶಕಗಳ ಬೇಡಿಕೆಯಾಗಿದ್ದ ಖಾಸಗಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಶಾಸಕ ಬಿ.ಕೆ. ಸಂಗಮೇಶ್ವರ್ ಅವರು ಇಂದು ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಎ.8ರಿಂದ ನಗರಸಭೆ ಚುನಾವಣೆಯ ನೀತಿಸಂಹಿತೆ ಜಾರಿಗೆ ಬರಲಿದೆ. ಮಳೆಗಾಲ ಆರಂಭಕ್ಕೂ ಮುನ್ನ ನಿಲ್ದಾಣ ಕಾಮಗಾರಿ ಮುಕ್ತಾಯವಾಗಬೇಕು ಎಂಬುದು ನಮ್ಮ ಉದ್ದೇಶ. ಹೀಗಾಗಿ, ಕಾಮಗಾರಿಗೆ ತೊಂದರೆಯಾಗಬಾರದು ಎಂದು ಕಾರಣಕ್ಕಾಗಿ ತರಾತುರಿಯಲ್ಲಿ ಗುದ್ದಲಿ ಪೂಜೆ ನೆರವೇರಿಸಲಾಗಿದೆ ಎಂದು ಸ್ಪಷ್ಟನೆ ನೀಡಿದರು.ದಶಕಗಳಿಂದ ನಗರದಲ್ಲಿ ಖಾಸಗಿ ಬಸ್ ನಿಲ್ದಾಣ ನಿರ್ಮಿಸಬೇಕೆಂಬ ಬೇಡಿಕೆ ಇತ್ತು. ಈ ಹಿಂದೆ 2012ರ ನನ್ನ ಅವಧಿಯಲ್ಲಿ ನಿಲ್ದಾಣಕ್ಕೆ ಕಾಂಕ್ರೀಟ್ ರಸ್ತೆ ನಿರ್ಮಿಸಿಕೊಡಲಾಗಿತ್ತು. ನಂತರ 2018ರಲ್ಲಿ ಸುಸಜ್ಜಿತ ಖಾಸಗಿ ಬಸ್ ನಿಲ್ದಾಣ ನಿರ್ಮಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಪ್ರಸ್ತಾವನೆಗೆ ಸರ್ಕಾರ ಒಪ್ಪಿಗೆ ಸೂಚಿಸಿ 2.17 ಕೋಟಿ ರೂ. ವೆಚ್ಚದಲ್ಲಿ ಬಸ್ ನಿಲ್ದಾಣಕ್ಕೆ ಅನುಮೋದನೆ ನೀಡಿದೆ ಎಂದರು.
ಇನ್ನು, ಕೆಎಸ್‌ಆರ್‌ಟಿಸಿ ಬಸ್ ಘಟಕದಲ್ಲಿ ಸುಮಾರು 4 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಮುಖ್ಯ ಬಸ್ ನಿಲ್ದಾಣ ನಿರ್ಮಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಹ ಸಲ್ಲಿಸಲಾಗಿದೆ ಎಂದರು.ಖಾಸಗಿ ಬಸ್ ಏಜೆಂಟರ್‌ಗಳ ಸಂಘದ ಅಧ್ಯಕ್ಷ ಶ್ರೀನಿವಾಸ್, ಉದ್ಯಮಿ ಎ. ಮಾಧು, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಯುವ ಕಾಂಗ್ರೆಸ್ ಅಧ್ಯಕ್ಷ ವಿನೋದ್, ಲೋಕೇಶ್, ಬಾಬಾಜಾನ್, ಶಿವಣ್ಣ, ಮಂಜು, ಜಾರ್ಜ್, ಮುರುಗನ್ ಸೇರಿದಂತೆ ಹಲವರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post