ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಉಡುಪಿ: ಈಗಾಗಲೇ ಕೊರೋನಾ ಪಾಸಿಟಿವ್ ಪ್ರಕರಣದಿಂದ ಅಕ್ಷರಶಃ ತತ್ತರಿಸಿ ಹೋಗಿರುವ ಜಿಲ್ಲೆಯಲ್ಲಿ ಇಂದು ಮತ್ತೆ 300ಕ್ಕೂ ಅಧಿಕ ಪಾಸಿಟಿವ್ ಪ್ರಕರಣ ಸಾಧ್ಯತೆಯಿದೆ ಎಂದು ಸಚಿವ ಡಾ.ಸುಧಾಕರ್ ಸ್ಪೋಟಕ ಮಾಹಿತಿ ನೀಡಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಇಂದು ಜಿಲ್ಲೆಯಲ್ಲಿ 300ರಿಂದ 350 ಪ್ರಕರಣಗಳ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗ ಹರಡುವಿಕೆಯನ್ನು ನಿಯಂತ್ರಿಸುವ ಸಭೆಯನ್ನು ಈಗಾಗಲೇ ಆ ಜಿಲ್ಲೆಗಳ ಅಧಿಕಾರಿಗಳೊಂದಿಗೆ ನಡೆಸಲಾಗಿದೆ ಎಂದಿದ್ದಾರೆ.
ಉಡುಪಿಗೆ ಮಹಾರಾಷ್ಟ್ರದಿಂದ ಆಗಮಿಸಿರುವ ನಾಗರಿಕರಲ್ಲಿ ಶೇ.90 ರಷ್ಟು ಮಂದಿಯಲ್ಲಿ ಕೋವಿಡ್19 ಪಾಸಿಟಿವ್ ಬಂದಿದ್ದು, ಜಿಲ್ಲೆಯಲ್ಲಿ ಈವರೆಗೆ 563 ಕೊರೋನಾ ವೈರಸ್ ಪ್ರಕರಣಗಳು ವರದಿಯಾಗಿವೆ.
Get In Touch With Us info@kalpa.news Whatsapp: 9481252093
Discussion about this post