ಮಡಿಕೇರಿ: ಪೋಸ್ಟ್ ಕಾರ್ಡ್ ವೆಬ್’ಸೈಟ್ ಮುಖ್ಯಸ್ಥ ಮಹೇಶ್ ವಿಕ್ರಂ ಹೆಗ್ಡೆ ಅವರನ್ನು ಮತ್ತೆ ಮಡಿಕೇರಿಯಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಲಿಂಗಾಯತ ಧರ್ಮ ಇಬ್ಭಾಗ ವಿಚಾರಕ್ಕೆ ಸಂಬಂಧಪಟ್ಟಂತೆ ನ್ಯೂಸ್ ವೆಬ್ ಸೈಟ್’ನಲ್ಲಿ ತಮ್ಮ ಹೆಸರಿನಲ್ಲಿ ನಕಲಿ ಪತ್ರವನ್ನು ಪ್ರಕಟಿಸಿದ್ದಾರೆ ಎಂದು ಮಹೇಶ್ ವಿಕ್ರಮ್ ವಿರುದ್ಧ ಸಚಿವ ಎಂ.ಬಿ. ಪಾಟೀಲ್ ಕಳೆದ ಎಪ್ರಿಲ್ 16ರಂದು ವಿಜಯಪುರದಲ್ಲಿ ಕೇಸು ದಾಖಲಿಸಿದ್ದರು.
ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ ಎನ್ನಲಾಗಿದೆ. ಆದರೆ, ನಿನ್ನೆಯ ಮಹೇಶ್ ಬಂಧನದಲ್ಲಿ ವಿಜಯಪುರ ಜಿಲ್ಲಾ ಪೊಲೀಸರು ಭಾಗಿಯಾಗಿಲ್ಲ ಎಂದು ತಿಳಿದುಬಂದಿದೆ.
Discussion about this post