ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಶುಕ್ರವಾರ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಂತಿಮ ಯಾತ್ರೆ ಆರಂಭವಾಗಿದ್ದು, ಸಕಲ ಸರ್ಕಾರಿ ಗೌರವ ಸಲ್ಲಿಸಲಾಯಿತು.
ಇಂದು ನಸುಕಿನಿಂದಲೇ ಅಂತ್ಯಸಂಸ್ಕಾರದ ವಿಧಿವಿಧಾನಗಳು ಆರಂಭವಾಗಿದ್ದು, ರಾಘವೇಂದ್ರ ರಾಜಕುಮಾರ್ ಪುತ್ರ ವಿನಯ್ ಎಲ್ಲವನ್ನೂ ನೆರವೇರಿಸುತ್ತಿದ್ದಾರೆ.

ಪುನೀತ್’ಗೆ ಅಂತಿಮವಾಗಿ ಸಕಲ ಸರ್ಕಾರಿ ಗೌರವವನ್ನು ಸಲ್ಲಿಕೆ ಮಾಡಲಾಗಿದ್ದು, ಸಿಎಂ ಬೊಮ್ಮಾಯಿ ಅವರು ರಾಷ್ಟ್ರ ಧ್ವಜವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದರು.
ಅಲಂಕೃತ ಹೂವಿನ ಪಲ್ಲಕ್ಕಿಯಲ್ಲಿ ಪುನೀತ್ ಶರೀರವನ್ನು ಮಲಗಿಸಲಾಗಿದೆ. ಪತ್ನಿ, ಪುತ್ರಿಯರು, ರಾಘವೇಂದ್ರ, ಶಿವರಾಜಕುಮಾರ್ ಸೇರಿದಂತೆ ಕುಟುಂಬಸ್ಥರು ಪುನೀತ್ ಶರೀರವನ್ನು ತಬ್ಬಿ ಕಣ್ಣೀರು ಹಾಕಿದ ದೃಶ್ಯ ಮನಕಲಕುವಂತಿತ್ತು.

ಸರ್ಕಾರಿ ಗೌರವ ಸಲ್ಲಿಸುವ ವೇಳೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ, ಸಿದ್ದರಾಮಯ್ಯ, ಕುಮಾರಸ್ವಾಮಿ, ಸಚಿವರುಗಳು, ಎಲ್ಲ ಪ್ರಮುಖ ನಟ ನಟಿಯರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















