ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹಾಸನ ಸಂಸದ ಪ್ರಜ್ವಲ್ ರೇವಣ್ಣ #PrajwalRevanna ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದ ವಿಚಾರದಲ್ಲಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ #HDDevegowda ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಪ್ರಜ್ವಲ್ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳುವುದರಲ್ಲಿ ನಮ್ಮ ಕಡೆಯಿಂದ ಯಾವುದೇ ತಕರಾರು ಇಲ್ಲ ಎಂದಿದ್ದಾರೆ.
ತಮ್ಮ 91ನೇ ಜನ್ಮ ದಿನದ ಅಂಗವಾಗಿ ಶ್ರೀವೆಂಕಟೇಶ್ವರ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ ನಂತರ ಅವರು ಮಾತನಾಡಿದ್ದಾರೆ.

Also read: ಜಾತಿ, ದುಡ್ಡಿನ ಮೇಲೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ: ಕಾನೂನು ಪ್ರಕೋಷ್ಠದ ಪ್ರವೀಣ್ ಆಕ್ರೋಶ
ತಮ್ಮ ಕುಟುಂಬದ ವಿರುದ್ಧ ರಾಜಕೀಯ ಕುತಂತ್ರ ನಡೆದಿದೆ. ಪ್ರಜ್ವಲ್ ಪ್ರಕರಣ ಬಗ್ಗೆ ಕುಮಾರಸ್ವಾಮಿ #HDKumaraswamy ಇಡೀ ಕುಟುಂಬದ ಪರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ರೇವಣ್ಣ ಪ್ರಕರಣದ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಅದರ ಬಗ್ಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news














Discussion about this post