ಯವತ್ಮಲ್: ತಾವು ಅಧಿಕಾರಕ್ಕೆ ಬಂದರೆ ಚುನಾವಣಾ ಆಯೋಗವನ್ನೇ ಜೈಲಿಗೆ ಕಳುಹಿಸುತ್ತೇನೆ ಎಂಬ ವಿವಾದಾತ್ಮಕ ಹೇಳಿಕೆಯನ್ನು ದಲಿತ ನಾಯಕ ಹಾಗೂ ಸಂಸದ ಪ್ರಕಾಶ್ ಅಂಬೇಡ್ಕರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸಾರ್ವಜನಿಕ ಸಮಾರಂಭದಲ್ಲಿ ನಿನ್ನೆ ಮಾತನಾಡಿರುವ ಅವರು, ಪುಲ್ವಾಮಾ ಭಯೋತ್ಪಾದಕ ದಾಳಿಯ ಕುರಿತಾಗಿ ಮಾತನಾಡಲು ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ಅವಕಾಶ ನೀಡಿಲ್ಲ. ದಾಳಿಯಲ್ಲಿ 42 ಯೋಧರನ್ನು ಕಳೆದುಕೊಂಡರೂ ಏನೂ ಮಾಡದೇ ಸುಮ್ಮನೆ ಕುಳಿತಿದ್ದೇವೆ. ಆದರೆ, ಈ ವಿಚಾರದಲ್ಲಿ ಮಾತನಾಡದಂತೆ ಆಯೋಗ ಸೂಚಿಸಿದೆ ಎಂದು ಕಿಡಿ ಕಾರಿದ್ದಾರೆ.
ಚುನಾವಣಾ ಆಯೋಗ ನಮ್ಮನ್ನು ಹೇಗೆ ಕಟ್ಟುಹಾಕುವುದಕ್ಕೆ ಸಾಧ್ಯ? ಎಂದಿರುವ ಅವರು, ಸಂವಿಧಾನ ನಮಗೆ ಮಾತನಾಡುವ ಹಕ್ಕು ನೀಡಿದೆ. ನಾನು ಬಿಜೆಪಿಯಲ್ಲ, ಅಧಿಕಾರಕ್ಕೆ ಬಂದರೆ ಚುನಾವಣಾ ಆಯೋಗವನ್ನೇ 2 ದಿನ ಜೈಲಿಗೆ ಕಳಿಸುತ್ತೇನೆ ಎಂದು ಕಿಡಿ ಕಾರಿದ್ದಾರೆ.
Discussion about this post