ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಈ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಬಿಜೆಪಿ 300+ ಸ್ಥಾನಗಳನ್ನು ಗೆಲ್ಲಿದೆ ಎಂದು ಹಿರಿಯ ರಾಜಕೀಯ ವಿಶ್ಲೇಷಕ ಪ್ರಶಾಂತ್ ಕಿಶೋರ್ #PrashantKishor ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಬಿಜೆಪಿ ಏಕಾಂಗಿಯಾಗಿ 300+ ಸ್ಥಾನಗಳನ್ನು ಗೆಲ್ಲಲಿದೆ. ತೆಲಂಗಾಣದಲ್ಲಿ ಕಮಲ ಪಕ್ಷ ಮೊದಲ ಅಥವಾ ಎರಡನೇ ಅತಿದೊಡ್ಡ ಪಕ್ಷವಾಗಲಿದೆ ಎಂದಿದ್ದಾರೆ.
ಇನ್ನು, ಇದೇ ಮೊದಲ ಬಾರಿಗೆ ತಮಿಳುನಾಡಿನಲ್ಲಿ ಬಿಜೆಪಿಯ #BJP ಮತಗಳಿಕೆ ಎರಡಂಕಿಯ ಶೇಕಡಾವಾರು ತಲುಪಲಿದೆ ಎಂದರು.
ಇದರೊಂದಿಗೆ, ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮುವುದು ನಿಶ್ಚಿತ ಎಂದು ಭವಿಷ್ಯ ನುಡಿದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – editor@kalpa.news info@kalpa.news
Discussion about this post