ಜೈಪುರ: ಮುಸ್ಲಿಂ ಸಮುದಾಯದ ಏರಿಕೆಯನ್ನು ತಡೆಗಟ್ಟಲು ಅವರಿಗೆ ಎರಡು ಮಕ್ಕಳ ಮಿತಿಯನ್ನು ಹೇರುವ ಮೂಲಕ, ಮುಸ್ಲಿಂ ಸಮುದಾಯದ ಜನಸಂಖ್ಯೆ ಏರಿಕೆಯನ್ನು ತಡೆಗಟ್ಟಿ ಎಂದು ಅಂತಾರಾಷ್ಟ್ರೀಯ ಹಿಂದೂ ಪರಿಷತ್ ಸ್ಥಾಪಕ ಪ್ರವೀಣ್ ತೊಗಾಡಿಯಾ ಆಗ್ರಹಿಸಿದ್ದಾರೆ.
ಈ ಕುರಿತಂತೆ ಇಂದು ಮಾತನಾಡಿರುವ ಅವರು, ಮುಸ್ಲಿಂ ಜನಸಂಖ್ಯೆ ಏರಿಕೆಯನ್ನು ತಡೆಗಟ್ಟುವುದು ಮಾತ್ರವಲ್ಲದೇ, ಅವರಿಗೆ ನೀಡಿರುವ ಅಲ್ಪ ಸಂಖ್ಯಾತ ಮಾನ್ಯತೆಯನ್ನು ರದ್ದುಗೊಳಿಸಬೇಕು. ಜನರಿಂದ ಸಂಗ್ರಹಿಸಿದ ತೆರಿಗೆ ಹಣವನ್ನು ಮುಸ್ಲಿಮರಿಗಾಗಿ ಖರ್ಚು ಮಾಡಬಾರದು. ಅದರ ಬದಲು ಇತರೆ ಸಮುದಾಯದ ಬಡವರ ಕಲ್ಯಾಣಕ್ಕಾಗಿ ಖರ್ಚು ಮಾಡಬೇಕು ಎಂದು ಆಗ್ರಹಿಸಿದ್ದಾರೆ.
Discussion about this post