No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Tuesday, August 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಶ್ರದ್ಧಾಪೂರ್ವಕ ಆಚರಣೆಯೊಂದಿಗೆ ಲೋಕಹಿತಕ್ಕಾಗಿ ಪ್ರಾರ್ಥಿಸಿ | ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಸಂದೇಶ

ಸೋಸಲೆ ಶ್ರೀ ವಿಧ್ಯುಕ್ತವಾಗಿ 8ನೇ ಚಾತುರ್ಮಾಸ ವ್ರತ ಸ್ವೀಕಾರ | ಸಂಸ್ಥಾನ ಪ್ರತಿಮೆಗಳಿಗೆ ವಿಶೇಷ ಪೂಜೆ ಸಮರ್ಪಣೆ

kalpa News by kalpa News
August 3, 2024
in ಮೈಸೂರು
0
ಶ್ರದ್ಧಾಪೂರ್ವಕ ಆಚರಣೆಯೊಂದಿಗೆ ಲೋಕಹಿತಕ್ಕಾಗಿ ಪ್ರಾರ್ಥಿಸಿ | ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಸಂದೇಶ

ಶ್ರೀ ರಾಮೇಶ್ವರಂನಿಂದ ಆಗಮಿಸಿದ್ದ ಪ್ರಧಾನ ಅರ್ಚಕರು ಶ್ರೀಗಳಿಗೆ ದೇವರ ಪ್ರಸಾದ, ವಸ್ತ್ರ, ಪುಷ್ಪಮಾಲೆ ಪ್ರದಾನ ಮಾಡಿದರು.

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ದೇವರ ಅನುಗ್ರಹ ದೊರೆತರೆ ಜೀವನದ ಎಲ್ಲ ತಾಪಗಳೂ ನಿವಾರಣೆ ಆಗುತ್ತವೆ ಎಂದು ಸೋಸಲೆ ಶ್ರೀ ವ್ಯಾಸರಾಜರ ಮಠಾಧೀಶ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ನುಡಿದರು.

ಅವರು ಶುಕ್ರವಾರ ಸೋಸಲೆ ಗ್ರಾಮದ ವ್ಯಾಸರಾಜರ ಮಠದಲ್ಲಿ ವಿಧ್ಯುಕ್ತವಾಗಿ 8ನೇ ಚಾತುರ್ಮಾಸ ವ್ರತ ದೀಕ್ಷೆ ಸ್ವೀಕರಿಸಿ ಅಮೃತೋಪದೇಶ ನೀಡಿದರು.

ಸಮೃದ್ಧವಾಗಿ ಮಳೆ ಸುರಿದರೆ ಇಳೆ ತಂಪಾಗುತ್ತದೆ. ಹಲವು ರೀತಿಯ ಸಸ್ಯಗಳು ಹೂವು, ಕಾಯಿ, ಹಣ್ಣು ಬಿಡುತ್ತವೆ. ಹಾಗೆಯೇ ಶ್ರೀಕೃಷ್ಣನ ಕೃಪೆ ನಮ್ಮ ಮೇಲೆ ಬಿದ್ದರೆ ಸಂಕಷ್ಟಗಳೆಲ್ಲವೂ ಕರಗಿ ಜೀವನ ಸಮೃದ್ಧಿಯಾಗುತ್ತದೆ. ಆದ ಕಾರಣ ನಾವು ಬೇಡುವುದಾದರೆ ದೇವರ ಅನುಗ್ರಹವನ್ನೇ ಬೇಡೋಣ ಎಂದು ಅವರು ಹೇಳಿದರು.

Also read: ತುಂಗಾ ಜಲಾಶಯ ಸುತ್ತಮುತ್ತ ನಿಷೇದಾಜ್ಞೆ ಜಾರಿ: ಜಿಲ್ಲಾಧಿಕಾರಿ ಆದೇಶ

ಸೋಸಲೆ ಗ್ರಾಮದಲ್ಲಿ ಶುಕ್ರವಾರ ವ್ಯಾಸರಾಜರ ಮಠಾಧೀಶರಾದ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ 8ನೇ ಚಾತುರ್ಮಾಸ ವ್ರತ ಸ್ವೀಕರಿಸಿ, ಹಸಿ ದರ್ಬಾರ್ ನಡೆಸಿ ಅನುಗ್ರಹ ಸಂದೇಶ ನೀಡಿದರು.

ಸಜ್ಜನರು, ಸಾಧಕರು, ತಪಸ್ವಿಗಳು ಮತ್ತು ಜ್ಞಾನಿಗಳು ಯಾವಾಗಲೂ ಚಾತಕ ಪಕ್ಷಿಗಳಂತೆ ಭಗವಂತನ ಕರುಣಾ ದೃಷ್ಟಿಗಾಗಿ ಕಾಯುತ್ತಿರುತ್ತಾರೆ. ಶ್ರೀಕೃಷ್ಣನೆಂಬ ಮೇಘವು ಅನುಗ್ರಹವೆಂಬ ಮಳೆಯನ್ನು ಸುರಿಸಲಿ ಎಂದು ಪ್ರಾರ್ಥಿಸುತ್ತಾರೆ. ಕೃಪೆಯ ವೃಷ್ಟಿಯಾದರೆ ಲೌಕಿಕ ಜೀವನದ ಯಾವ ಸಮಸ್ಯೆಗಳೂ ನಮ್ಮನ್ನು ಕಾಡಲಾರವು. ಆದಕಾರಣ ದಕ್ಷಿಣಾಯಣ ಪುಣ್ಯಕಾಲದ ಚಾತುರ್ಮಾಸ ವ್ರತ ಸ್ವೀಕಾರದ ಈ ಸಂದರ್ಭದಲ್ಲಿ ನಾವೆಲ್ಲರೂ ಭಗವಂತನ ಮಹಾಕೃಪೆಗಾಗಿ ಶ್ರದ್ಧೆಯಿಂದ ಪ್ರಾರ್ಥನೆ ಸಮರ್ಪಿಸೋಣ ಎಂದು ಶ್ರೀ ವಿದ್ಯಾಶ್ರೀಶ ತೀರ್ಥರು ಹೇಳಿದರು.

ಲೋಕಹಿತಕ್ಕಾಗಿ ಪ್ರಾರ್ಥನೆ ಮಾಡೋಣ
ಚಾತುರ್ಮಾಸ ಪರ್ಯಂತ ನಾವೆಲ್ಲರೂ ವ್ರತ, ನಿಯಮ ಮತ್ತು ಆಹಾರ ಪದ್ಧತಿ ಅನುಸರಿಸೋಣ. ಶಾರೀರಿಕವಾಗಿ, ಮಾನಸಿಕವಾಗಿ ಸದೃಢರಾಗಿ ಜ್ಞಾನಕಾರ್ಯಗಳನ್ನು ಹೆಚ್ಚಾಗಿ ನಡೆಸೋಣ. ಮಹಾಗುರು ಶ್ರೀ ವ್ಯಾಸರಾಜರು ಹೇಳಿದ ಮಾರ್ಗದಲ್ಲಿ ಸಾಗಿ, ಮುಖ್ಯಪ್ರಾಣನನ್ನು ಅನಂತವಾಗಿ ಅರ್ಚಿಸೋಣ. ನಮ್ಮ ಪರಂಪರೆಯ 8 ಯತಿಗಳು ವೃಂದಾನವಸ್ಥರಾಗಿರುವ ಈ ಕ್ಷೇತ್ರದಲ್ಲಿ ನಮ್ಮ ಶ್ರದ್ಧಾಪೂರ್ವಕ ಆಚರಣೆಗಳನ್ನು ಮಾಡುತ್ತಾ, ಲೋಕಹಿತಕ್ಕಾಗಿ ಪ್ರಾರ್ಥನೆ ಮಾಡೋಣ ಎಂದು ಶ್ರೀಗಳು ನುಡಿದರು.
Kalahamsa Infotech private limitedಮಹಾ ಸಂಸ್ಥಾನದ ದಿವಾನರಾದ ಬ್ರಹ್ಮಣ್ಯ ಆಚಾರ್ಯ ಅವರು ಚಾತುರ್ಮಾಸ ಸಂಕಲ್ಪ ವಿಧಿಗಳನ್ನು ಪಠಿಸಿದರು. ಸೋಸಲೆ ಮಠದ ವ್ಯವಸ್ಥಾಪಕ ಶ್ರೀಧರ, ಸಿಇಒ ಬದರೀನಾಥ, ಬಲಸೇವೆ ಕೃಷ್ಣಾಚಾರ್ಯ, ಚಾತುರ್ಮಾಸ ಸಮಿತಿ ಮುಖ್ಯಸ್ಥ ರಾಯರ ಹುಂಡಿ ಆನಂದ ಆಚಾರ್ಯ, ಮಠಾಧಿಕಾರಿಗಳಾದ ಪವಮಾನಾಚಾರ್ಯ ಕಂಬಾಲೂರು ಮತ್ತು ವೆಂಕಟಣ್ಣ ಇತರರು ಹಾಜರಿದ್ದರು.

ಸಂಸ್ಥಾನ ಪೂಜೆ-ಹಸಿ ದರ್ಬಾರ್
ಚಾತುರ್ಮಾಸ ಸಂಕಲ್ಪಕ್ಕೂ ಮುನ್ನ ಸ್ವಾಮೀಜಿ ಸಂಸ್ಥಾನ ಪ್ರತಿಮಾ ಶ್ರೀ ಮೂಲ ಗೋಪಾಲಕೃಷ್ಣದೇವರ ಪೂಜೆ ನೆರವೇರಿಸಿ, ಪರಂಪರೆಯ ಹಿರಿಯ ಗುರುಗಳ ವೃಂದಾವನಗಳಿಗೆ ಹಸ್ತೋದಕ ಸಮರ್ಪಣೆ ಮಾಡಿದರು. ವಿದ್ವಾಂಸರಿಂದ ವೇದಘೋಷವಾದ ನಂತರ ವ್ರತ ಸಂಕಲ್ಪ ಮಾಡಿದಾಗ ಶ್ರೀ ರಾಮೇಶ್ವರಂನಿಂದ ಆಗಮಿಸಿದ್ದ ಪ್ರಧಾನ ಅರ್ಚಕರು ಶ್ರೀಗಳಿಗೆ ದೇವರ ಪ್ರಸಾದ, ಪುಷ್ಪಮಾಲೆ ಪ್ರದಾನ ಮಾಡಿದರು. ನಂತರ ವಿಶೇಷ ವೇದಿಕೆಯಲ್ಲಿ ಶ್ರೀಗಳು ಸಾಂಪ್ರದಾಯಿಕ ವಸ್ತ್ರ, ಪೇಟಾ ಧರಿಸಿ ಹಸಿ ದರ್ಬಾರ್ ನಡೆಸಿ, ನೂರಾರು ಭಕ್ತರಿಗೆ ಮಂತ್ರಾಕ್ಷತೆ ಅನುಗ್ರಹ ಮಾಡಿದ್ದು ವಿಶೇಷವಾಗಿತ್ತು.

ಸೋಸಲೆ ಗ್ರಾಮದ ಮಠದಲ್ಲಿ ಶುಕ್ರವಾರ ವ್ಯಾಸರಾಜರ ಮಠಾಧೀಶರಾದ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ವಿಶೇಷ ಬೆಳ್ಳಿ ಮಂಟಪದಲ್ಲಿ ಸಂಸ್ಥಾನ ಪೂಜೆ ನೆರವೇರಿಸಿ ದೇವರಿಗೆ ಮಂಗಳಾರತಿ ಸಮರ್ಪಿಸಿದರು.

ಪ್ರತಿನಿತ್ಯದ ಕಾರ್ಯಕ್ರಮ
ಶ್ರೀಗಳ ಚಾತುರ್ಮಾಸ್ಯ ವ್ರತದ ಅಂಗವಾಗಿ ಆ. 2 ರಿಂದ ಸೆಪ್ಟೆಂಬರ್ 17ರವರೆಗೆ ಪ್ರತಿನಿತ್ಯವೂ ಶ್ರೀ ಮಠದಲ್ಲಿ ನಿತ್ಯ ಜ್ಞಾನ ಯಜ್ಞ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ನಿತ್ಯ ಬೆಳಗ್ಗೆ 7ಕ್ಕೆ ಶ್ರೀಗಳಿಂದ ಅಣುಭಾಷ್ಯ ಶಾಸ್ತ್ರ ಪಾಠ, ವಿದ್ವಾಂಸರಿಂದ ಗೃಹಸ್ಥರಿಗೆ ಸೂತ್ರ ದೀಪಿಕಾ ಗ್ರಂಥದ ಪಾಠ, ಮಾತೆಯರಿಗೆ ಶ್ರೀ ಹರಿಕಥಾಮೃತಸಾರ ಪಾಠ, ಸಂಜೆ 6ಕ್ಕೆ ನಾಡಿನ ಪ್ರಖ್ಯಾತ ವಿದ್ವಾಂಸರಿಂದ ಹರಿವಂಶ ಗ್ರಂಥದ ಪ್ರವಚನ ನಡೆಯಲಿದೆ ಎಂದು ವ್ಯವಸ್ಥಾಪಕರು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news          

http://kalpa.news/wp-content/uploads/2024/04/VID-20240426-WA0008.mp4
Tags: Chaturmasya VratamKannada News WebsiteLatest News KannadamysoreSosaleSosale Vyasaraja Mathಚಾತುರ್ಮಾಸ್ಯ ವ್ರತಮೈಸೂರುರಾಮೇಶ್ವರಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿಶ್ರೀ ವ್ಯಾಸರಾಜರ ಮಠಶ್ರೀ ಹರಿಕಥಾಮೃತಸಾರಸೋಸಲೆ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮನು ಭಾಕರ್ ಹ್ಯಾಟ್ರಿಕ್ ಮೆಡಲ್ ಜಸ್ಟ್ ಮಿಸ್ | ಆದರೂ ಈಕೆಯ ಸಾಧನೆಗೆ ದೇಶವೇ ಸೆಲ್ಯೂಟ್

Next Post

ಬಿಜೆಪಿ-ಜೆಡಿಎಸ್ ಪಾದಯತ್ರೆ | ಅವರದ್ದೇ ಕರ್ಮಕಾಂಡ ಬಯಲಿಗೆ | ಸಚಿವ ಮಧು ಬಂಗಾರಪ್ಪ

kalpa News

kalpa News

Next Post
ಮೋದಿ ಗಡ್ಡ, ಅಬ್ದುಲ್ ಕಲಾಂ ಹೇರ್ ಸ್ಟೈಲ್ ಬಗ್ಗೆ ಯಾಕೆ ಮಾತಾಡಲ್ಲ: ಮಧು ಬಂಗಾರಪ್ಪ ಪ್ರಶ್ನೆ

ಬಿಜೆಪಿ-ಜೆಡಿಎಸ್ ಪಾದಯತ್ರೆ | ಅವರದ್ದೇ ಕರ್ಮಕಾಂಡ ಬಯಲಿಗೆ | ಸಚಿವ ಮಧು ಬಂಗಾರಪ್ಪ

Leave a Reply Cancel reply

Your email address will not be published. Required fields are marked *

No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL