ಕಲ್ಪ ಮೀಡಿಯಾ ಹೌಸ್ | ಪ್ರಯಾಗರಾಜ್ (ಉತ್ತರ ಪ್ರದೇಶ) |
ಶತಮಾನದ ಮಹಾಕುಂಭದ ಮೌನಿ ಅಮಾವಾಸ್ಯೆಯ #Mouni Amavasye ದಿನದ ಅಂಗವಾಗಿ ತ್ರಿವೇಣಿ ಸಂಗಮದಲ್ಲಿ #Trivenisangama ಪವಿತ್ರ ಸ್ನಾನ ಮಾಡಲು ಕೋಟ್ಯಾಂತರ ಭಕ್ತರು ಆಗಮಿಸಿದ್ದು, ಈವೇಳೆ ಸಂಭವಿಸಿ ಕಾಲ್ತುಳಿತದಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ.
ಇಂದು ಬೆಳಗಿನ ಜಾವ ತ್ರಿವೇಣಿ ಸಂಗಮದಲ್ಲಿ ಜನದಟ್ಟಣೆ, ನೂಕು ನುಗ್ಗಲಿನಿಂದಾಗಿ ಕಾಲ್ತುಳಿತ #Stampede in Mahakumba ಉಂಟಾಗಿದ್ದು, ಈ ವೇಳೆ ಹಲವರು ಗಾಯಗೊಂಡು, 15 ಮಂದಿ ಸಾವನ್ನಪ್ಪಿದ್ದು, ಇನ್ನೂ 5 ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಜ.13ರಂದು ಆರಂಭವಾದ ಮಹಾಕುಂಭ ಮೇಳಕ್ಕೆ #Mahakumbhamela ಈ ಬಾರಿ ಅತ್ಯಧಿಕ ಸಂಖ್ಯೆಯ ಭಕ್ತರು ಆಗಮಿಸುತ್ತಿದ್ದು, ಇದುವರೆಗೆ ಸುಮಾರು 15 ಕೋಟಿ ಮಂದಿ ಸಂಗಮಕ್ಷೇತ್ರದಲ್ಲಿ ಪವಿತ್ರಸ್ನಾನ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ.
ಎರಡನೇ ಅಮೃತಸ್ನಾನದ ದಿನವಾದ ಬುಧವಾರ ಲಕ್ಷಾಂತರ ಭಕ್ತರು ಪ್ರಯಾಗರಾಜ್ ಯಾತ್ರೆ ಕೈಗೊಂಡಿರುವುದರಿAದ ಭಾರಿ ಜನದಟ್ಟಣೆ ಕಂಡುಬAದಿದೆ.
ಕಾಲ್ತುಳಿತದಲ್ಲಿ ಗಾಯಗೊಂಡಿರುವ ಹಲವರ ಪೈಕಿ ಕೆಲವರು ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ.
ಈ ಕುರಿತಂತೆ ಮಾತನಾಡಿರುವ, ಅಖಿಲ ಭಾರತೀಯ ಅಖಾರಾ ಪರಿಷತ್ ಅಧ್ಯಕ್ಷ ಶ್ರೀ ಮಹಾಂತ ರವೀಂದ್ರ, ಕಾಲ್ತುಳಿತ ಘಟನೆ ವರದಿಯಾದ ಬೆನ್ನಲ್ಲೇ 2ನೇ ಅಮೃತಸ್ನಾನಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ. ಅಮೃತಸ್ನಾನಕ್ಕೆ ಆಗಮಿಸದಂತೆ ಆಡಳಿತಯಂತ್ರ ನಮಗೆ ಮನವಿ ಮಾಡಿಕೊಂಡಿದೆ ಎಂದಿದ್ದಾರೆ.
ಶ್ರೀಗಳು ಮತ್ತು ನಾಗಾ ಸಾಧುಗಳ ಮೆರವಣಿಗೆ ಮುಂದೆ ಸಾಗುವ ಸಿದ್ಧತೆ ನಡೆದಿದ್ದರೂ, ನಾವು ಪ್ರಸ್ತುತ ಹಿಂದಿರುಗಿದ್ದೇವೆ. ಸದ್ಯಕ್ಕೆ ಅಮೃತಸ್ನಾನ ತಡೆಹಿಡಿಯಲಾಗಿದೆ. ಶೀಘ್ರವೇ ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post