No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Friday, October 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಫೆ.21ರ ನಾಳೆ ಸಿಲಿಕಾನ್ ಸಿಟಿಯಲ್ಲಿ ವಿವಿಧೆಡೆ ಮಧ್ವನವಮಿ ಉತ್ಸವಕ್ಕೆ ಸಿದ್ದತೆ

kalpa News by kalpa News
February 20, 2021
in Special Articles
0
ಫೆ.21ರ ನಾಳೆ ಸಿಲಿಕಾನ್ ಸಿಟಿಯಲ್ಲಿ ವಿವಿಧೆಡೆ ಮಧ್ವನವಮಿ ಉತ್ಸವಕ್ಕೆ ಸಿದ್ದತೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಸುಮಾರು ಏಳು ಶತಮಾನಗಳ ಹಿಂದೆ ಉಡುಪಿಯಲ್ಲಿ ಶ್ರೀಕೃಷ್ಣನನ್ನು ಪ್ರತಿಷ್ಠಾಪಿಸಿ ತಣ್ತೀವಾದವೆಂಬ ವೇದಾಂತ ಪ್ರಕಾರವನ್ನು ಪ್ರಚಾರಕ್ಕೆ ತಂದ ಮಧ್ವಾಚಾರ್ಯರು ಭೌತಿಕವಾಗಿ ಕೊನೆಯದಾಗಿ ಕಂಡು ಬಂದ ದಿನ ಮಧ್ವನವಮಿ! 2021 ಫೆ.21ರ ನಾಳೆ ಸಿಲಿಕಾನ್ ಸಿಟಿಯಲ್ಲಿ ವಿವಿಧೆಡೆ ಮಧ್ವನವಮಿ ಉತ್ಸವವನ್ನು ಆಚರಿಸಲು ಸಕಲ ಸಿದ್ದತೆಗಳು ನಡೆದಿದೆ.

ನಗರದ ಪದ್ಮನಾಭನಗರದ ಶ್ರೀ ಸುಮಧ್ವ ವಿಜಯ ಸೌಧದಲ್ಲಿ ಶ್ರೀ ರಾಮ-ಸೀತಾ-ಲಕ್ಷ್ಮಣ ಸಮೇತಶ್ರೀ ಮುಖ್ಯ ಪ್ರಾಣ ದೇವರು ಹಾಗೂ ದ್ವೈತ ಗುರು ಮಧ್ವಾಚಾರ್ಯರ ಶಿಲಾ ಮೂರ್ತಿ ಇದ್ದು ಪದ್ಮನಾಭನಗರದ ಶ್ರೀಮತ್ ಆನಂದ ತೀರ್ಥ ಸೇವಾ ಟ್ರಸ್ಟ್‌’ನಿಂದ ಶ್ರೀ ಸುಮಧ್ವ ವಿಜಯ ಸೌಧದಲ್ಲಿ ಮಧ್ವರ ಸನ್ನಿಧಾನಕ್ಕೆ ವಿಶೇಷ ಪೂಜೆ, ಬನಶಂಕರಿ 3 ನೆಯ ಹಂತದ ಇಟ್ಟಮಡುವಿನ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಸನ್ನಿಧಾನದಲ್ಲಿ, ಕಲ್ಪವೃಕ್ಷ ಕ್ಷೇತ್ರ-ಪೂರ್ಣಪ್ರಜ್ಞ ನಗರ, ಜಯನಗರದ 5ನೆಯ ಬಡಾವಣೆಯಲ್ಲಿರುವ ನಂಜನಗೂಡು ಶ್ರೀರಾಘವೇಂದ್ರ ಸ್ವಾಮಿಗಳವರ ಮಠ ಹಾಗೂ ಸಿಲಿಕಾನ್ ಸಿಟಿಯಲ್ಲಿ ಇನ್ನೂ ವಿವಿಧೆಡೆ ಶ್ರೀ ಮಧ್ವನವಮಿ ಉತ್ಸವವನ್ನು ಫೆ.21ರಂದು ಹಮ್ಮಿಕೊಳ್ಳಲಾಗಿದೆ.

21 ರಂದು ಬೆಳಗ್ಗೆ 7 ಗಂಟೆಗೆ ಸಾಮೂಹಿಕ ಸುಮಧ್ವ ವಿಜಯ ಪಾರಾಯಣ, ಸರ್ವಮೂಲ ಗ್ರಂಥ ಪಾರಾಯಣ, ಮಧ್ವಾಚಾರ್ಯರಿಗೆ ಪಾದಪೂಜೆ, ಕನಕಾಭಿಷೇಕ, ಪ್ರವಚನ ಮಂಗಳ, ಪ್ರಾಕಾರದಲ್ಲಿ ಶ್ರೀ ಮಧ್ವಾಚಾರ್ಯರ ರಥೋತ್ಸವ, ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ, ಸಂಜೆ 6 ರಿಂದ ದೇವರನಾಮಗಳ ಗಾಯನ ಕಾರ್ಯಕ್ರಮ ಇರಲಿದೆ.
ವೇದಾಂತ ಸಾಮ್ರಾಜ್ಯದ ಚಕ್ರವರ್ತಿ ಶ್ರೀ ಮಧ್ವಾಚಾರ್ಯರು
ಶ್ರೀ ಮಧ್ವಾಚಾರ್ಯರು (1238-1317) ದ್ವೈತಮತದ ಸ್ಥಾಪಕರು ಮತ್ತು ತತ್ವಜ್ಙಾನಿಗಳು. ಶ್ರೀ ಮಧ್ವಾಚಾರ್ಯರು ಉಡುಪಿಯ ಹತ್ತಿರ ಪಾಜಕದಲ್ಲಿ ವಿಜಯ ದಶಮಿಯಂದು ಕ್ರಿಶ 1238 ರಲ್ಲಿ ತಂದೆ ಮಧ್ಯಗೇಹ ಭಟ್ಟ (ನಡ್ಡಿಲ್ಲಾಯ ನಾರಾಯಣ ಭಟ್ಟ), ತಾಯಿ ವೇದವತಿಗೆ ಒಂದು ಚಿಕ್ಕ ಕುಟೀರದಲ್ಲಿ ಜನಿಸಿದರು. ಆ ಮಗುವಿಗೆ ವಾಸುದೇವನೆಂದು ನಾಮಕರಣ ಮಾಡಿದರು. ನಂತರ ಮಧ್ವರು ಪೂರ್ಣಪ್ರಜ್ಞ, ಪೂರ್ಣ ಬೋಧ, ಆನಂದ ತೀರ್ಥ, ಅನುಮಾನ ತೀರ್ಥ, ಮಧ್ವಾಚಾರ್ಯ ಎಂಬ ಹೆಸರುಗಳಿಂದ ಪ್ರಸಿದ್ಧರಾದರು. ಅವರ ಜನನಕ್ಕೆ ಮುಂಚೆ ಅವರ ತಾಯಿ ತಂದೆ ಉಡುಪಿ ಪೇಟೆಗೆ ಹೋಗಿದ್ದಾಗ ಒಬ್ಬ ಭಿಕ್ಷುಕ ಶ್ರೀ ಅನಂತೇಶ್ವರ ದೇವಸ್ಥಾನದ ಸ್ಥಂಭವನ್ನು ಏರಿ, ’ಈ ಊರಿನಲ್ಲಿ ವಾಯು ದೇವನು ಅವತರಿಸುವನು’ ಎಂದು ಕೂಗಿ ಹೇಳಿದನೆಂದು ಪ್ರತೀತಿ.

ಹದಿಮೂರು ಹದಿನಾಲ್ಕನೆಯ 1238-1317 ಶತಮಾನದಲ್ಲಿ ಅವರು ಭಕ್ತಿ ಮಾರ್ಗದ ಪ್ರವರ್ತಕರಲ್ಲಿ ಪ್ರಮುಖರು, ವೇದಾಂತ ದರ್ಶನದಲ್ಲಿ, ಮಧ್ವಚಾರ್ಯರು ದ್ವೈತ ಸಿದ್ಧಾಂತದ ಉಗ್ರ ಪ್ರತಿಪಾದಕರು, ಅವರು ವಾಯುವಿನ ಅವತಾರದಲ್ಲಿ ಮೂರನೆಯವರಾದ ಮಾರುತಿ ಭೀಮರ ನಂತರ ಬಂದ ಅವತಾರವೆಂದು ಹೇಳುತ್ತಾರೆ(ಮಹಾಭಾರತ ತಾತ್ಪರ್ಯ ನಿರ್ಣಯದಲ್ಲಿ ಅವರೇ ಹೇಳಿಕೊಂಡಿದ್ದಾರೆ).

ವಾಸುದೇವನು ಚಿಕ್ಕ ಬಾಲಕನಾಗಿದ್ದಾಗಲೇ ಅಸಾಧಾರಣ ಪ್ರತಿಭೆಯನ್ನು ತೋರಿದನು. ಅವನು ಹನ್ನೊಂದನೆಯ ವರ್ಷದಲ್ಲಿ ಉಡುಪಿಯಲ್ಲಿದ್ದ ಅಚ್ಯುತ ಪ್ರೇಕ್ಷರಿಂದ ಸಂನ್ಯಾಸ ದೀಕ್ಷೆಯನ್ನು ಸ್ವೀಕರಿಸಿದರು. ಅವರು ಸಂನ್ಯಾಸ ದೀಕ್ಷೆ ಕೊಡುವಾಗ ಪೂರ್ಣಪ್ರಜ್ಞರೆಂದು ನಾಮಕರಣ ಮಾಡಿದರು.

ಸಂನ್ಯಾಸ ದೀಕ್ಷೆಯನ್ನು ತೆಗೆದುಕೊಂಡ ಒಂದು ತಿಂಗಳ ನಂತರ ಪಂಡಿತೋತ್ತಮರನ್ನು ವೇದಾಂತ ತರ್ಕದಲ್ಲಿ ಸೋಲಿಸಿದರು. ಅದನ್ನು ನೋಡಿ ಅಚ್ಯುತ ಪ್ರೇಕ್ಷಕರು ಅವರಿಗೆ ವೇದಾಂತ ಸಾಮ್ರಾಜ್ಯದ ಚಕ್ರವರ್ತಿಯೆಂದು ಹೇಳಿ ಆನಂದತೀರ್ಥರೆಂಬ ಬಿರುದನ್ನು ಕೊಟ್ಟರು.

ತತ್ವವಾದ
ವೇದದ ಬಲಿಷ್ಟ ಸೂಕ್ತದಲ್ಲಿ ಇರುವ ಮಧ್ವ ಹೆಸರನ್ನು ಆಯ್ದುಕೊಂಡು ಆ ಹೆಸರಿನಲ್ಲಿ ಗ್ರಂಥ ರಚಿಸಿ, ಮಧ್ವಾಚಾರ್ಯರೆಂದು ಪ್ರಸಿದ್ಧರಾದರು. ಅವರು ಪ್ರಚುರಪಡಿಸಿದ ದ್ವೈತ ಸಿದ್ಧಾಂತ ತತ್ವವಾದ ಅಥವಾ ದ್ವೈತ ಮತವೆಂದು ಪ್ರಸಿದ್ಧವಾಗಿದೆ.

ಸರ್ವ ಮೂಲಗ್ರಂಥ
ದಕ್ಷಿಣ ಭಾರತ ಪ್ರವಾಸ ಕೈಕೊಂಡು ಅನಂತ ಶಯನ, ಶ್ರೀರಂಗಂ ಮೊದಲಾದ ಕಡೆ ತಮ್ಮ ತತ್ವವಾದ ವನ್ನು ಪ್ರಚಾರ ಮಾಡಿದರು. ಸಂಪ್ರದಾಯವಾದಿಗಳಿಂದ ಇದಕ್ಕೆ ಪ್ರಬಲ ವಿರೋಧ ಕಂಡುಬಂದಿತು. ಮಧ್ವರು ಅದಕ್ಕೆ ಜಗ್ಗದೆ ತಮ್ಮ ವಾದವನ್ನು ಸಮರ್ಥಿಸಿ ಕೊಂಡು ಉಡುಪಿಗೆ ಹಿಂತಿರುಗಿ ಗೀತೆಗೆ ಭಾಷ್ಯವನ್ನು ಬರೆದ ಅವರು ತತ್ವವಾದ ಸಿದ್ಧಾಂತದ ಆಧಾರದ ಮೇಲೆ 37 ಗ್ರಂಥಗಳನ್ನು ಬರೆದರು, ಅವನ್ನು ಸರ್ವ ಮೂಲಗ್ರಂಥಗಳೆಂದು ಕರೆಯುತ್ತಾರೆ.
ಈ ಗ್ರಂಥಗಳ ಬಗೆಗೆ ಮತ್ತು ತತ್ವವಾದದ ಬಗೆಗೆ ಭಾರತದಾದ್ಯಂತ ತೀವ್ರ ಚರ್ಚೆ ನೆಡೆಯಿತು. ಮಧ್ವರು ತಮ್ಮ ವಾದಕ್ಕೆ ಮೂರು ಬಗೆಯ ಪ್ರಮಾಣಗಳನ್ನು ಆಧಾರವಾಗಿ ತೆಗೆದುಕೊಂಡಿದ್ದಾರೆ. ಅವು ಪ್ರತ್ಯಕ್ಷ, ಅನುಮಾನ ತಾರ್ಕಿಕ, ಮತ್ತು ಆಗಮ.

ಶ್ರೀ ಕೃಷ್ಣನ ಮೂರ್ತಿ ಪ್ರತಿಷ್ಠಾಪನೆ
ಉಡುಪಿಗೆ ಬದರಿಯಿಂದ ಬಂದ ಅವರು ಉಡುಪಿಯಲ್ಲಿ ನೆಲೆಸಿ ದಶ ಉಪನಿಷತ್ತುಗಳಿಗೆ ಭಾಷ್ಯವನ್ನು ಬರೆದರು. ಋಗ್ವೇದದ 40 ಸೂಕ್ತಗಳಿಗೆ ಟೀಕೆಯನ್ನು ಬರೆದರು. ಭಾಗವತ (ಮಹಾಭಾರತ?) ತಾತ್ಪರ್ಯ ನಿರ್ಣಯವನ್ನು ಬರೆದರು. ಪಶ್ಚಿಮ ಸಮುದ್ರ ತೀರದಲ್ಲಿ ಸಿಕ್ಕಿದ ಶ್ರೀ ಕೃಷ್ಣನ ಮೂರ್ತಿಯನ್ನು ಉಡುಪಿಯಲ್ಲಿ ಪ್ರತಿಷ್ಠಾಪಿಸಿದರು.

ಭೀಮನ ಗಧೆ
ಶ್ರೀ ಮಧ್ವಾಚಾರ್ಯರು ಕುರುಕ್ಷೇತ್ರಕ್ಕೆ ಬಂದಾಗ ಅಲ್ಲಿ ಒಂದು ಘಟನೆ ನಡೆಯಿತು,ಅವರು ಒಂದು ಸ್ಥಳದಲ್ಲಿ ತಮ್ಮ ಶಿಷ್ಯರಿಗೆ ಅಗೆಯಲು ಹೇಳಿದರು. ಅವರು ಅಲ್ಲಿ ಅಗೆದಾಗ ಅವರಿಗೆ ಅಲ್ಲಿ ಒಂದು ದೊಡ್ಡ ಗದೆ ಕಂಡಿತು. ಅದು ದ್ವಾಪರದಲ್ಲಿ ಭೀಮನು ಉಪಯೋಗಿಸಿದ ಗಧೆಯೆಂದು ತಿಳಿಸಿ ಅದನ್ನು ಪುನಃ ಹಾಗೆಯೇ ಮಣ್ಣಿನಲ್ಲಿ ಮುಚ್ಚಿಸಿದರು.

ದಕ್ಷಿಣ ಯಾತ್ರೆ
ದಕ್ಷಿಣ ಯಾತ್ರೆಯನ್ನು ಮಾಡಿ ಕಾಸರಗೋಡಿನ ಪದ್ಮ ತೀರ್ಥರನ್ನೂ ಪುಂಡರೀಕಪುರಿಗಳನ್ನೂ ವಾದದಲ್ಲಿ ಸೋಲಿಸಿದರು. ಪದ್ಮತೀರ್ಥರು ಪೇಜತ್ತಾಯ ಶಂಕರ ಪಂಡಿತರ ಮೂಲಕ ಮಧ್ವರ ಗ್ರಂಥಗಳನ್ನು ಅಪಹರಿಸಿದ್ದರೆಂದೂ ಮಧ್ವರೊಡನೆ ವಾದವಾದ ನಂತರ ಆ ಗ್ರಂಥಗಳನ್ನು ಹಿಂತಿರುಗಿಸಿದರೆಂದೂ ಹೇಳುತ್ತಾರೆ. ಅವರಿಬ್ಬರ ವಾದ ಸಾರಾಂಶವನ್ನು ವಾದ ಅಥವಾ ತತ್ವೋದ್ಯೋತ ಗ್ರಂಥವಾಗಿ ರಚಿಸಿರುವುದಾಗಿ ಹೇಳುತ್ತಾರೆ. ಅವರು ಆನಂತರ ಆಸ್ಥಾನ ಪಂಡಿತರಾದ ತ್ರಿವಿಕ್ರಮ ಪಂಡಿತರನ್ನು 15 ದಿನಗಳಕಾಲ ವಾದ ಮಾಡಿ ಸೋಲಿಸಿದರೆಂದು ಹೇಳುತ್ತಾರೆ. ಅವರು ನಂತರ ಮಧ್ವರ ಬ್ರಹ್ಮ ಸೂತ್ರಕ್ಕೆ ಟೀಕೆಯನ್ನು ಬರೆದರು. ನಾಲ್ಕು ಭಾಗಗಳಲ್ಲಿರುವ ಇದನ್ನು ನಾಲ್ಕು ಶಿಷ್ಯರಿಗೆ ಏಕ ಕಾಲದಲ್ಲಿ ಬಿಡುವಿಲ್ಲದೆ ಹೇಳಿ ಬರೆಸಿದರೆಂದು ಹೇಳುತ್ತಾರೆ. ಅದೇ ಸಮಯದಲ್ಲಿ ನ್ಯಾಯವಿವಾರ್ಣವ ವೆಂಬ ಗ್ರಂಥವನ್ನೂ ರಚಿಸಿದ್ದಾಗಿ ಹೇಳುತ್ತಾರೆ.

ಸುಮರು 70 ವರ್ಷ ವಯಸ್ಸಾದ ಮಧ್ವರು ತಮ್ಮ ಸೋದರನಿಗೆ ಸನ್ಯಾಸ ದೀಕ್ಷೆ ಕೊಟ್ಟು ಅವರನ್ನು ಸೋದೆ ಮಠ ಮತ್ತು ಸುಬ್ರಹ್ಮಣ್ಯ ಮಠಕ್ಕೆ ಅಧಿಪತಿಗಳನ್ನಾಗಿ ಮಾಡಿದರು.

ಉಡುಪಿಯ ಅಷ್ಟ ಮಠಗಳು
ಉಡುಪಿಯ ಅಷ್ಟ ಮಠಗಳಿಗೆ ತಮ್ಮ ಶಿಷ್ಯರಿಗೆ ದೀಕ್ಷೆ ಕೊಟ್ಟು ಮಠಾಧಿಪತಿಗಳಾಗಿ ನೇಮಿಸಿದರು.
1. ಹೃಷೀಕೇಶ ತೀರ್ಥ (ಫಲಿಮಾರು ಮಠ)
2. ನರಸಿಂಹ(ನರಹರಿ)ತೀರ್ಥ (ಆದಮಾರು ಮಠ)
3. ಜನಾರ್ಧನ ತೀರ್ಥ (ಕೃಷ್ಣಾಪುರ ಮಠ)
4. ಉಪೇಂದ್ರ ತೀರ್ಥ (ಪುತ್ತಿಗೆ ಮಠ)
5. ವಾಮನ ತೀರ್ಥ (ಶಿರೂರು ಮಠ)
6. ವಿಷ್ಣು ತೀರ್ಥ (ಸೋದೆ ಮಠ, ಸುಬ್ರಹ್ಮಣ್ಯ ಮಠ)
7. ಶ್ರೀರಾಮ ತೀರ್ಥ (ಕಾಣಿಯೂರು ಮಠ)
8. ಅಧೋಕ್ಷಜ(ಅಕ್ಷೋಭ್ಯ) ತೀರ್ಥ (ಪೇಜಾವರ ಮಠ)

ಮಧ್ವರ ಪ್ರಸಿದ್ಧ ಶಿಷ್ಯರು-9. ಪದ್ಮನಾಭ ತೀರ್ಥ; 10. ಮಾಧವ ತೀರ್ಥ
ಉಡುಪಿಯ ಸುತ್ತ ಮುತ್ತ ಸಂಚರಿಸಿ ಉಜಿರೆಯ ಬ್ರಾಹ್ಮಣರೊಡನೆ ಚರ್ಚಿಸಿ ಪೂಜಾವಿಧಿಗೆ ಸಂಬಂಧಪಟ್ಟಂತೆ ಕರ್ಮನಿಯಮ ರಚಿಸಿದರು ಇದು ಖಂಡಾರ್ಥ ನಿರ್ಣಯವೆಂದು ಹೆಸರು ಪಡೆದಿದೆ. ನಂತರ ಪರಂತಿಯಲ್ಲಿರುವ ಪಂಚಲಿಂಗೇಶ್ವರ ದೇವಾಲಯವನ್ನು ಜೀರ್ಣೋದ್ಧಾರ ಮಾಡಿದರು. ಇವರ ತತ್ವವಾದವು ಭಕ್ತಿ ಪಂಥಕ್ಕೂ, ಹರಿದಾಸ ಪಂಥಕ್ಕೂ ದಾರಿ ಮಾಡಿ ಕೊಟ್ಟಿತು. ಸಂಗೀತದ ಪ್ರೋತ್ಸಾಹಕ್ಕೂ, ಕನ್ನಡದಲ್ಲಿ ದಾಸ ಪಂಥದ ಮಾರ್ಗ ಬೆಳೆಯಲೂ ಇವರ ದರ್ಶನ ಸ್ಪೂರ್ತಿ ನೀಡಿತು. ಇವರ ಶಿಷ್ಯರಾದ ನರಹರಿ ತೀರ್ಥರು ಯಕ್ಷಗಾನ ಹಾಗೂ ಕೂಚುಪುಡಿ ನೃತ್ಯ ಪ್ರಾಕಾರಗಳ ಪುನರುತ್ಥಾನಕ್ಕೂ, ಬೆಳವಣಿಗೆಗೂ ಪ್ರೋತ್ಸಾಹಿಸಿದರು.

ಶ್ರೀ ರಾಘವೇಂದ್ರ ಯತಿಗಳು
ಹದಿನಾರನೆಯ ಶತಮಾನದಲ್ಲಿದ್ದ ಶ್ರೀರಾಘವೇಂದ್ರ ಸ್ವಾಮಿಗಳು ಇವರ ಪರಂಪರೆಯವರಾಗಿದ್ದು ಬಹಳ ಪ್ರಸಿದ್ಧರಾಗಿದ್ದಾರೆ. ಅವರ ಮಠಗಳು ಭಾರತದ ಅನೇಕ ನಗರಗಳಲ್ಲಿ ಸ್ಥಾಪನೆಗೊಂಡಿವೆ. ಈಗೀಗ ಮಧ್ವಮಠಗಳನ್ನೂ ದೇಶ ವಿದೇಶಗಳಲ್ಲಿ ಸ್ಥಾಪಿಸಿ ಮಧ್ವ ತತ್ವ ಪ್ರಸಾರ, ಅನೇಕ ಶಿಕ್ಷಣ ಸಂಸ್ಥೆಗಳ ಮೂಲಕ ಸಮಾಜ ಸೇವೆ ಮಾಡುತ್ತಿವೆ. ಅನೇಕ ಕಡೆ ವೇದ ಪಾಠಶಾಲೆಗಳನ್ನು ನಡೆಸುತ್ತಿವೆ. ಮೇಲೆ ತಿಳಿಸಿದ ಉಡುಪಿಯ ಅಷ್ಟ ಮಠಗಳು ಪ್ರಸಿದ್ಧವಾಗಿವೆ. ಮಧ್ವರು ತಾವು ಮುಖ್ಯ ಪ್ರಾಣನಾದ ಹನುಮನ, ಭೀಮನ, ನಂತರದ ಮೂರನೇ ಅವತಾರವೆಂದು ಹೇಳಿಕೊಂಡಿದ್ದಾರೆ.

ಮಧ್ವ ನವಮಿ
ತಮ್ಮ 79ನೆಯ ವಯಸ್ಸಿನಲ್ಲಿ ಕಲಿ 4418 ಕ್ರಿಶ 1317ರಲ್ಲಿ ಒಬ್ಬರೇ ಬದರಿಕಾಶ್ರಮಕ್ಕೆ ಪ್ರಯಾಣ ಬೆಳಸಿದರು. ಈ ದಿನವನ್ನು ಮಧ್ವ ನವಮಿ ಎಂದು ಇಂದಿಗೂ ಆಚರಿಸುತ್ತಾರೆ.

ಮಧ್ವನವಮಿ ಈ ಬಾರಿ 2021 ಫೆ.21 ರಂದು ಬಂದಿದ್ದು ಎಲ್ಲಡೆ ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ದತೆಗಳು ನಡೆಯುತ್ತಿದೆ. ಮಧ್ವನವಮಿಯಂದು ವೇದಾಂತ ಸಾಮ್ರಾಜ್ಯದ ಚಕ್ರವರ್ತಿ ಶ್ರೀ ಮಧ್ವಾಚಾರ್ಯರ ದರ್ಶನ ಪಡೆದು ಪಾವನರಾಗೋಣ.

(ಮಾಹಿತಿ: ವಿವಿಧ ಮೂಲಗಳಿಂದ ಕಲೆ ಹಾಕಿ ಲೇಖನ ಬರೆಯಲಾಗಿದೆ)


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaMadhwanavamiSpecial ArticleSri MadhwacharyaUdupiVasudevaಅಷ್ಟ ಮಠಉಡುಪಿದ್ವೈತಮತಮಧ್ವನವಮಿವಾಸುದೇವವೇದಾಂತ ಸಾಮ್ರಾಜ್ಯಶ್ರೀ ಮಧ್ವಾಚಾರ್ಯರುಸೋದೆ ಮಠ
Share210Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪಿಎಫ್‌ಐ ಸಂಘಟನೆ ವಿರುದ್ಧ ಕಠಿಣ ಕ್ರಮ ಜರುಗಿಸಿ: ಗೃಹ ಸಚಿವ ಬೊಮ್ಮಾಯಿ

Next Post

ಪಂಚಮಸಾಲಿ ಸಮುದಾಯ 2ಎಗೆ ಸೇರಿಸಲು ವಿರೋಧವಿಲ್ಲ: ಸಚಿವ ಜಗದೀಶ್ ಶೆಟ್ಟರ್ ಸ್ಪಷ್ಟನೆ

kalpa News

kalpa News

Next Post
ಪಂಚಮಸಾಲಿ ಸಮುದಾಯ 2ಎಗೆ ಸೇರಿಸಲು ವಿರೋಧವಿಲ್ಲ: ಸಚಿವ ಜಗದೀಶ್ ಶೆಟ್ಟರ್ ಸ್ಪಷ್ಟನೆ

ಪಂಚಮಸಾಲಿ ಸಮುದಾಯ 2ಎಗೆ ಸೇರಿಸಲು ವಿರೋಧವಿಲ್ಲ: ಸಚಿವ ಜಗದೀಶ್ ಶೆಟ್ಟರ್ ಸ್ಪಷ್ಟನೆ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL