ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂರನೇ ಅವಧಿಯ ಸರ್ಕಾರದ ಪ್ರಸಕ್ತ ಸಾಲಿನ ಬಜೆಟ್ ಪ್ರತಿಗೆ #PresidentofIndia ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅನುಮೋದನೆ ನೀಡಿದ್ದಾರೆ.
ಬಜೆಟ್ ಮಂಡನೆಗೂ ಮುನ್ನ ರಾಷ್ಟ್ರಪತಿ ಭವನಕ್ಕೆ ತೆರಳಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ #NirmalaSeetharaman ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬಜೆಟ್ ಪ್ರತಿಯನ್ನು ಡಿಜಿಟಲ್ ಪ್ರತಿಯನ್ನು ತೋರಿಸಿದರು.
ಪ್ರಸಕ್ತ ಸಾಲಿನ ಬಜೆಟ್ ಪ್ರತಿಗೆ ಹಾಗೂ ಮಂಡನೆಗೆ ರಾಷ್ಟ್ರಪತಿಗಳು ಅನುಮೋದನೆ ನೀಡಿ, ಅಭಿನಂದಿಸಿದ್ದಾರೆ.
ನಂತರ, ಶಿಷ್ಟಾಚಾರದಂತೆ ನಿರ್ಮಲಾ ಸೀತಾರಾಮನ್ ಅವರಿಗೆ ದ್ರೌಪದಿ ಮುರ್ಮು ಅವರು ಮೊಸರು-ಸಕ್ಕರೆ ತಿನ್ನಿಸಿ ಶುಭ ಕೋರಿದರು.
ಸತತ 9ನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸಲಿರುವ ನಿರ್ಮಲಾ ಸೀತಾರಾಮನ್ ಅವರು ಏನೆಲ್ಲಾ ಕೊಡುಗೆ ನೀಡಲಿದ್ದಾರೆ ಎಂಬ ಭಾರೀ ನಿರೀಕ್ಷೆ ದೇಶದಲ್ಲಿ ಮೂಡಿದೆ.
ರಾಷ್ಟ್ರಪತಿ ಭವನದಿಂದ ಸಂಸತ್ ಭವನಕ್ಕೆ ತೆಳರಳಿರುವ ವಿತ್ತ ಸಚಿವರು ಸಂಪುಟ ಸಭೆಯಲ್ಲಿ ಪಾಲ್ಗೊಂಡು, ನಂತರ ಸಂಸತ್ ಸಭೆಯಲ್ಲಿ ಪಾಲ್ಗೊಂಡು ಬಜೆಟ್ ಮಂಡಿಸಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















