ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸೆಪ್ಟೆಂಬರ್ 26 ರಿಂದ ಪ್ರಾರಂಭವಾಗಲಿರುವ ನಾಡಹಬ್ಬ ಮೈಸೂರು ದಸರಾವನ್ನು ಉದ್ಘಾಟಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಮ್ಮತಿಸಿದ್ದಾರೆ.
ರಾಷ್ಟ್ರಪತಿಯವರನ್ನು ಆಹ್ವಾನಿಸಿ ಸೆಪ್ಟೆಂಬರ್ 6 ರಂದು ಮುಖ್ಯಮಂತ್ರಿಯವರು ಪತ್ರ ಬರೆದಿದ್ದರು. ಇದಕ್ಕೆ ರಾಷ್ಟ್ರಪತಿಯವರು ಸಮ್ಮತಿ ಸೂಚಿಸಿರುವುದಾಗಿ ರಾಷ್ಟ್ರಪತಿ ಭವನದ ಅಧಿಕಾರಿಗಳು ಮುಖ್ಯಮಂತ್ರಿ ಕಚೇರಿಗೆ ಪತ್ರದ ಮೂಲಕ ಮಾಹಿತಿ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post