ಕಲ್ಪ ಮೀಡಿಯಾ ಹೌಸ್ | ಸೊರಬ |
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸೊರಬ #Soraba ತಾಲೂಕು ಶಾಖೆಯ ವತಿಯಿಂದ ಜುಲೈ22ರ ಶನಿವಾರ ಪತ್ರಿಕಾ ದಿನಾಚರಣೆ #PressDay ನಡೆಯಲಿದೆ.
ಈ ಕುರಿತಂತೆ ಮಾತನಾಡಿದ ಸಂಘದ ಪ್ರಧಾನ ಕಾರ್ಯದರ್ಶಿ ಯು.ಎಲ್. ಸಂದೀಪ್, ಅಂದು ಬೆಳಗ್ಗೆ 10.30 ಕ್ಕೆ ಸೊರಬ #Soraba ಪಟ್ಟಣದ ಶ್ರೀರಂಗ ಕನ್ವೆನ್ಷನ್ ಹಾಲ್ (ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದ ಪಕ್ಕ) ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಸಚಿವ ಎಸ್. ಮಧು ಬಂಗಾರಪ್ಪ #MadhuBangarappa ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಂಘದ ಅಧ್ಯಕ್ಷ ನಾಗರಾಜ್ ಜೈನ್ ಅಧ್ಯಕ್ಷ ತೆ ವಹಿಸಲಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಕೆ.ವಿ. ಶಿವಕುಮಾರ್, ರಾಜ್ಯ ಸಂಘದ ನಿರ್ದೇಶಕ ಎನ್. ರವಿಕುಮಾರ್, ಜಿಲ್ಲಾ ಉಪಾಧ್ಯಕ್ಷ ಕೆ.ಎಸ್. ಹುಚ್ರಾಯಪ್ಪ, ಜಿಲ್ಲಾ ರಕ್ಷ ಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್, ತಹಸೀಲ್ದಾರ್ ಹುಸೇನ್ ಸರಕಾವಾಸ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
Also Read: ಭದ್ರಾವತಿ-ಮನೆ ಮುಂದೆಯೇ ರೌಡಿ ಶೀಟರ್ ಬರ್ಬರ ಹತ್ಯೆ: ಇಷ್ಟಕ್ಕೂ ನಡೆದಿದ್ದೇನು?
ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮೀ ಶಿಬರೂರು ಅವರಿಂದ ಮಾಧ್ಯಮ ಮತ್ತು ಯುವ ಜನತೆ ಕುರಿತು ವಿಶೇಷ ಉಪನ್ಯಾಸ ನಡೆಯಲಿದೆ.
ಡಾ.ಬಿ.ಸಿ. ರಾಯ್ ಪ್ರಶಸ್ತಿ ಪುರಸ್ಕೃತ ಪ್ರಸೂತಿ ಹಾಗೂ ಸ್ತ್ರೀ ರೋಗ ತಜ್ಞ ಡಾ.ನಾಗೇಂದ್ರಪ್ಪ ಅವರಿಗೆ ಸನ್ಮಾನ ಹಾಗೂ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕೋರಿದ್ದಾರೆ.
(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















