ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಾದ್ಯಂತ ಅಕ್ಟೋಬರ್ 25ರಿಂದ 1-5ನೆಯ ತರಗತಿಗಳನ್ನು ಮರು ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಕುರಿತಂತೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾತನಾಡಿದ್ದು, ಅಕ್ಟೋಬರ್ 25ರಿಂದ ಪ್ರಾಥಮಿಕ ಶಾಲೆಗಳನ್ನು ಮರು ಆರಂಭಿಸಲು ನಿರ್ಧರಿಸಿದೆ. ಶೇ.50ರಷ್ಟು ವಿದ್ಯಾರ್ಥಿಗಳ ಹಾಜರಾತಿಗೆ ಅವಕಾಶವಿದ್ದು, ಪಾಲಕರ ಅನುಮತಿ ಪತ್ರ ಕಡ್ಡಾಯವಾಗಿದೆ. ಅಲ್ಲದೇ, ಶಾಲೆಗೆ ಹಾಜರಾಗುವುದು ಈ ಮಕ್ಕಳಿಗೆ ಕಡ್ಡಾಯವಾಗಿರುವುದಿಲ್ಲ ಎಂದಿದ್ದಾರೆ.
ಶಾಲಾ ಆರಂಭಕ್ಕೆ ಈಗಾಗಲೇ ಮಾರ್ಗಸೂಚಿ ಪ್ರಕಟಿಸಲಾಗಿದ್ದು, ಶಿಕ್ಷಕರು ಕಡ್ಡಾಯವಾಗಿ ಎರಡೂ ಡೋಸ್ ಕೋವಿಡ್ ಲಸಿಕೆ ಪಡೆದುಕೊಂಡಿರಬೇಕು, ಶಾಲೆ ಹಾಗೂ ತರಗತಿಯಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿರುವುದಿಲ್ಲ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post