ತಿರುವನಂತಪುರಂ: ಪ್ರಕೃತಿಯ ಮುನಿಸಿನ ಹಿನ್ನೆಲೆಯಲ್ಲಿ ವರುಣ ದೇವನ ಅಬ್ಬರಕ್ಕೆ ತತ್ತರಿಸಿ, ಪ್ರವಾಹದಿಂದ ನಲುಗಿರುವ ಕೇರಳ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ 500 ಕೋಟಿ ರೂ.ಗಳ ಮಧ್ಯಂತರ ಪರಿಹಾರವನ್ನು ಘೋಷಣೆ ಮಾಡಿದ್ದಾರೆ.
ಪ್ರವಾಹ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಇಂದು ಕೇರಳದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಅವರು, ಆನಂತರ ಉನ್ನತಮಟ್ಟದ ಸಭೆ ನಡೆಸಿದರು.
#WATCH: Prime Minister Narendra Modi conducts an aerial survey of flood affected areas. PM has announced an ex-gratia of Rs. 2 lakh per person to the next kin of the deceased and Rs.50,000 to those seriously injured, from PM’s National Relief Funds (PMNRF). #KeralaFloods pic.twitter.com/T6FYNVLmMu
— ANI (@ANI) August 18, 2018
ಉನ್ನತಾಧಿಕಾರಿಗಳ ಜೊತೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ಅವಲೋಕನ ನಡೆಸಿದ ಮೋದಿ, ಆನಂತರ ನಡೆದ ಸಭೆಯಲ್ಲಿ ಸಮಗ್ರ ಮಾಹಿತಿ ಪಡೆದುಕೊಂಡರು. ಆನಂತರ ಮಾತನಾಡಿರುವ ಅವರು, ಅಗತ್ಯವಿರುವ ಎಲ್ಲ ರೀತಿಯ ಸಹಾಯವನ್ನು ನೀಡಲು ಕೇಂದ್ರ ಸಿದ್ದವಿದೆ. ಸದ್ಯ ಮಧ್ಯಂತರ ಪರಿಹಾರವಾಗಿ 500 ಕೋಟಿ ರೂ.ಗಳನ್ನು ನೀಡುವುದಾಗಿ ಘೋಷಣೆ ಮಾಡಿದ್ದಾರೆ.
The Prime Minister is reviewing the flood situation in Kerala at a high-level meeting. @CMOKerala pic.twitter.com/3VNq0ehSry
— PMO India (@PMOIndia) August 18, 2018
ಕಳೆದೊಂದು ಶತಮಾನದಲ್ಲಿಯೇ ಭೀಕರ ಜಲಪ್ರಳಯಕ್ಕೆ ತುತ್ತಾಗಿರುವ ಕೇರಳದಲ್ಲಿ ಮಳೆರಾಯ ಇನ್ನೂ ಮುಂದುವರೆದಿದ್ದು, ಪ್ರವಾಹದಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ಇದರ ನಡುವೆಯೇ ಭಾರೀ ಮಳೆ ಮುಂದುವರೆದಿದ್ದು, ಪ್ರವಾಹ ಪರಿಸ್ಥಿತಿ ಹೆಚ್ಚಾಗುವ ಭೀತಿ ಎದುರಾಗಿದೆ.
Prime Minister Narendra Modi was accompanied by Kerala CM Pinarayi Vijayan, Governor P. Sathasivam and Union Tourism Minister KJ Alphons during aerial survey of flood affected areas. #KeralaFloods pic.twitter.com/s0LB2Z9J3q
— ANI (@ANI) August 18, 2018
ಇನ್ನು ಕೇರಳದ 14 ಜಿಲ್ಲೆಗಳಲ್ಲಿ ಪರಿಸ್ಥಿತಿ ಗಂಭೀರವಾಗಿದ್ದು, 11 ಜಿಲ್ಲೆಗಳಲ್ಲಿ ವಿಕೋಪಕ್ಕೆ ತಿರುಗಿದ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ ಒಟ್ಟು 324 ಮಂದಿ ಬಲಿಯಾಗಿದ್ದು, ಒಂದೇ ದಿನ 106 ಮಂದಿ ಬಲಿಯಾಗಿದ್ದಾರೆ.
Discussion about this post