ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಭೂತಾನ್ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಾಹ್ನ ದೆಹಲಿಗೆ ಬಂದಿಳಿದಿದ್ದು, ತಕ್ಷಣ ನೇರವಾಗಿ ಎಲ್’ಎನ್’ಜಿಪಿ ಆಸ್ಪತ್ರೆಗೆ ತೆರಳಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
ಕೆಂಪು ಕೋಟೆಯ ಬಳಿಯಲ್ಲಿ ನಿನ್ನೆ ಸಂಜೆ ಭೀಕರ ಬಾಂಬ್ ಸ್ಪೋಟ ಸಂಭವಿಸಿದ್ದು, ಘಟನೆಯಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ. ಇದೇ ವೇಳೆ ಪ್ರಧಾನಿಯವರು ಭೂತಾನ್ ಪ್ರವಾಸದಲ್ಲಿದ್ದರು. ಇಂದು ಮಧ್ಯಾಹ್ನ ದೆಹಲಿಗೆ ಬಂದಿಳಿದ ತಕ್ಷಣ ನೇರವಾಗಿ ಎಲ್’ಎನ್’ಜಿಪಿ ಆಸ್ಪತ್ರೆಗೆ ತೆರಳಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
ಪ್ರಧಾನಿ ಮೋದಿ ಗಾಯಾಳುಗಳೊಂದಿಗೆ ವೈಯಕ್ತಿಕವಾಗಿ ಮಾತನಾಡಿ ಸಾಧ್ಯವಿರುವ ಎಲ್ಲಾ ಸಹಾಯದ ಭರವಸೆ ನೀಡಿದರು.
ಆಸ್ಪತ್ರೆ ಆಡಳಿತ ಮಂಡಳಿಯೊಂದಿಗೆ ಮಾತನಾಡಿದ ಪ್ರಧಾನಿಯವರು, ಗಾಯಾಳುಗಳಿಗೆ ಸಾಧ್ಯವಾದಷ್ಟು ಅತ್ಯುತ್ತಮ ಚಿಕಿತ್ಸೆ ಹಾಗೂ ಸೌಲಭ್ಯಗಳನ್ನು ನೀಡುವಂತೆ ಸೂಚನೆ ನೀಡಿದರು.

ಇನ್ನು, ಆಸ್ಪತ್ರೆಯಿಂದ ತೆರಳಿದ ನಂತರ ಪ್ರಧಾನಿಯವರು ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ.
ಈ ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ, ರಕ್ಷಣಾ ಸಚಿವರು, ಗೃಹ ಸಚಿವರು ಮತ್ತು ವಿದೇಶಾಂಗ ಸಚಿವರಂತಹ ಪ್ರಮುಖ ಸದಸ್ಯರು ಭಾಗವಹಿಸಲಿದ್ದಾರೆ.
ಸ್ಫೋಟದ ತನಿಖೆಯ ಪ್ರಗತಿ, ಭದ್ರತಾ ಲೋಪಗಳ ಪರಿಶೀಲನೆ ಮತ್ತು ಭವಿಷ್ಯದ ಭಯೋತ್ಪಾದನಾ ನಿಗ್ರಹ ಕಾರ್ಯತಂತ್ರಗಳ ಕುರಿತು ಸಭೆಯಲ್ಲಿ ಚರ್ಚಿಸುವ ನಿರೀಕ್ಷೆಯಿದೆ.
ಈ ಸಭೆಯಲ್ಲಿ ಸ್ಫೋಟದ ಕುರಿತು ಮುಂದಿನ ಕ್ರಮ, ಸಂತ್ರಸ್ತರಿಗೆ ಪರಿಹಾರ ಪ್ಯಾಕೇಜ್’ಗಳು ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಕ್ರಮಗಳ ಕುರಿತು ಚರ್ಚಿಸಲಾಗುತ್ತದೆ.
ಅಲ್ಲದೇ, ಇಂದು ಸಂಜೆ 5:30ಕ್ಕೆ, ಪ್ರಧಾನಿಯವರು ಎರಡು ಪ್ರಮುಖ ಸಭೆಗಳ ಅಧ್ಯಕ್ಷತೆ ವಹಿಸಲಿದ್ದು, ಭಾರೀ ಕುತೂಹಲ ಕೆರಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post