ನವದೆಹಲಿ: ರೈತರ ಹೆಸರಿನಲ್ಲಿ ಕೆಲವರು ರಾಜಕೀಯ ಮಾಡುತ್ತಿದ್ದಾರೆ. ರೈತರ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವವರಿಗೆ ಬೆಂಬಲ ಬೆಲೆ ಹೆಚ್ಚಿಸುವ ಕುರಿತಂತೆ ಚರ್ಚೆ ನಡೆಸಲು ಸಮಯವಿಲ್ಲ. ಈ ಕುರಿತ ಕಡತಗಳನ್ನೂ ಮುಂದಕ್ಕೆ ಸಾಗಲೂ ಬಿಡುತ್ತಿಲ್ಲ. ರೈತರ ಕುರಿತಂತೆ ಇದೀಗ ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ ಎಂದು ಪ್ರತಿಪಕ್ಷಗಳನ್ನು ಪ್ರಧಾನಿ ನರೇಂದ್ರ ಮೋದಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಎರಡು ದಿನಗಳ ಕಾಲ ಉತ್ತರಪ್ರದೇಶಕ್ಕೆ ಪ್ರವಾಸ ಕೈಗೊಂಡಿರುವ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರತಿಪಕ್ಷಗಳ ಬೆವರಿಳಿಸಿದರು.
ರೈತರ ಕುರಿತಂತೆ ಇದೀಗ ಮೊಸಳೆ ಕಣ್ಣೀರು ಹಾಕುತ್ತಿರುವವರು, ತಮ್ಮ ಅಧಿಕಾರಾವಧಿಯಲ್ಲಿ ರಾಷ್ಟ್ರದಾದ್ಯಂತ ಪೂರ್ಣಗೊಳ್ಳದೆ ನೆಲಗುದಿಗೆ ಬಿದ್ದಿದ್ದ ನೀರಾವರಿ ಯೋಜನೆಗಳತ್ತ ಏಕೆ ಗಮನ ಹರಿಸಲಿಲ್ಲ ಎಂದು ಪ್ರಶ್ನಿಸಿದ್ದಾರೆ.
#WATCH: PM Narendra Modi addresses at a public event in Mirzapur, UP. https://t.co/r0SaOyUlP0
— ANI (@ANI) July 15, 2018
ಬಡವರು ಹಾಗೂ ಶ್ರೀಮಂತರ ನಡುವಿನ ಅಂತರವನ್ನು ದೂರಾಗಿಸಲು ಪ್ರಮುಖ ನಿರ್ಧಾರವೊಂದನ್ನು ನಮ್ಮ ಸರ್ಕಾರ ಕೈಗೊಂಡಿದ್ದು, ಇತರ ಫಲಿತಾಂಶ ಶೀಘ್ರದಲ್ಲಿಯೇ ಎಲ್ಲರಿಗೂ ತಿಳಿಯಲಿದೆ. ಇನ್ನು ಕೆಲವೇ ದಿನಗಳಲ್ಲಿ ಬಡವರೂ ಕೂಡ ಆತ್ಮವಿಶ್ವಾಸದಿಂದ ಕಣ್ಣು ತೆರೆದು ನೋಡಲಿದ್ದಾರೆ ಮೋದಿ ಹೇಳಿರುವುದು ಕುತೂಹಲ ಮೂಡಿಸಿದೆ.
ಹಿಂದಿನ ಸರ್ಕಾರ ಕೂಡ ಅಪೂರ್ಣ ಯೋಜನೆಗಳನ್ನು ಕೈಗೆತ್ತಿಕೊಂಡು, ಅವುಗಳು ಯಶಸ್ವಿಯಾಗದಂತೆ ಮಾಡಿತ್ತು. ಪ್ರಸ್ತುತ ದೇಶದಲ್ಲಿರುವ ಪರಿಸ್ಥಿತಿಗಳಿಗೆಲ್ಲಾ ನಾವೇ ಕಾರಣ. ಈ ಯೋಜನೆಗಳು ಕಾಲಕ್ಕೆ ಸರಿಯಾಗಿ ಪೂರ್ಣಗೊಂಡಿದ್ದರೆ, ಜನರು ನಿಮಗೆ ಲಾಭವಾಗುವಂತೆ ಮಾಡುತ್ತಿದ್ದರು. ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪೂರ್ವಾಂಚಲ್ ನಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಇದರ ಫಲಿತಾಂಶವನ್ನು ಎಲ್ಲರೂ ನೋಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡ ಮೋದಿ, ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ಮೂಲಕ, ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ. ಈ ವಿಚಾರದಲ್ಲಿ ರಾಹುಲ್ ಗಾಂಧಿ ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದಾರೆ ಎಂದರು.
Discussion about this post