ಕಲ್ಪ ಮೀಡಿಯಾ ಹೌಸ್ | ಸೊರಬ |
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಅಂಗವಾಗಿ ನಗರದ ನಮೋ ವೇದಿಕೆಯನ್ನು ಸೆ.17ರಂದು ಉದ್ಘಾಟನೆ ಮಾಡಲಾಗುತ್ತಿದ್ದು, ಇದೇ ವೇಳೆ ಹಲವು ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ.
ಅಂದು ಬೆಳಗ್ಗೆ 10 ಗಂಟೆಗೆ ಪುರಸಭೆ ವೃತ್ತದಿಂದ ಗಿರಿಜಾ ಶಂಕರ ಸಭಾ ಭವನದವರೆಗೆ ಅದ್ದೂರಿ ಮೆರವಣಿಗೆಯೊಂದಿಗೆ ಬೃಹತ್ ಬೈಕ್ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿವಮೊಗ್ಗ ವೈದ್ಯಕೀಯ ಬೋಧನಾ ಸಂಸ್ಥೆ, ಜಿಲ್ಲಾಸ್ಪತ್ರೆಯ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ಸಹ ನಡೆಯಲಿದೆ.
ಅಂದು ಬೆಳಗ್ಗೆ 11.30ಕ್ಕೆ ಹೊಸಪೇಟೆ ಬಡಾವಣೆಯ ಗಿರಿಜಾ ಶಂಕರ ಸಭಾ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಮಲೆನಾಡು ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಪದ್ಮನಾಭ ಭಟ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ನಮೋ ವೇದಿಕೆ ಸೊರಬ ಮಂಡಲದ ಪಾಣಿ ರಾಜಪ್ಪನವರು ಅಧ್ಯಕ್ಷತೆ ವಹಿಸಲಿದ್ದಾರೆ.
ದೇಶದ ಹೆಮ್ಮೆಯ ಪ್ರಧಾನಿಯವರ ಜನ್ಮ ದಿನದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸೊರಬ ಸಮಸ್ತ ನಾಗರಿಕರು ಪಾಲ್ಗೊಂಡು ಸಹಕಾರ ನೀಡಬೇಕು ಎಂದು ಆಯೋಜಕರು ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post