ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಪ್ರತಿಭಟನೆ ತೀವ್ರಗೊಂಡಿದ್ದು, ಇತಿಹಾಸಕಾರ ರಾಮಚಂದ್ರ ಗುಹಾ ಸೇರಿದಂತೆ ಹಲವರನ್ನು ಬಂಧಿಸಲಾಗಿದೆ.
ಬೆಂಗಳೂರಿನ ಟೌನ್ ಹಾಲ್ ಮುಂಭಾಗದಲ್ಲಿ ನಿಷೇಧಾಜ್ಞೆಯಿದ್ದರೂ ಪ್ರತಿಭಟನೆ ನಡೆಸುತ್ತಿದ್ದು, ಇತಿಹಾಸಕಾರ ರಾಮಚಂದ್ರ ಗುಹಾ ಸೇರಿದಂತೆ ನೂರಾರು ಮಂದಿಯನ್ನು ಬಂಧಿಸಲಾಗಿದೆ.
Karnataka: Left parties hold protest in Bengaluru against the amended #CitizenshipAct & #NRC. Visuals from Mysore Bank Circle area. Section 144 is imposed in the city. pic.twitter.com/f3LIjzqOHu
— ANI (@ANI) December 19, 2019
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೆಂಗಳೂರು, ಕಲಬುರಗಿ, ಬಳ್ಳಾರಿ ಸೇರಿದಂತೆ ರಾಜ್ಯದ ಹಲವೆಡೆ ಈಗಾಗಲೇ ಪ್ರತಿಭಟನೆಗಳು ತೀವ್ರಗೊಂಡಿದ್ದು, ಭಾರೀ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
#WATCH Karnataka: Police detained historian Ramachandra Guha during protest at Town Hall in Bengaluru, earlier today. #CitizenshipAct https://t.co/8jrDjtsOfm pic.twitter.com/P8csG0x9HN
— ANI (@ANI) December 19, 2019
ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್’ಆರ್’ಸಿ ಜಾರಿ ವಿರೋಧಿಸಿ ಎಡಪಕ್ಷಗಳು ಹಾಗೂ ವಿವಿಧ ಸಂಘಟನೆಗಳು ಹಲವೆಡೆ ಪ್ರತಿಭಟನೆ ನಡೆಸುತ್ತಿವೆ. ಆದರೆ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಿದ್ದರೂ ಕೂಡಾ ಪ್ರತಿಭಟನಾಕಾರರು ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆಗೆ ಇಳಿದಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post