ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತವಿರೋಧಿ ಕಾಯ್ದೆಗಳ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್‌ಗೆ ಪ್ರತಿಯೊಬ್ಬರೂ ಬೆಂಬಲಿಸುವುದು ಅಗತ್ಯ ಎಂದು ತಾಲೂಕು ವಕೀಲರ ಸಂಘದ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿ ಮಂಗಳವಾರ ನ್ಯಾಯಾಲಯದ ಕಾರ್ಯ ಕಲಾಪಗಳಿಂದ ಹೊರಗುಳಿದು ಮೆರವಣಿಗೆ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ಸಂಘದ ಕಚೇರಿಯಲ್ಲಿ ಸಂಘದ ಅಧ್ಯಕ್ಷ ವಿ. ವೆಂಕಟೇಶ್ ಅಧ್ಯಕ್ಷತೆಯಲ್ಲಿ ಸಭೆ ಸೇರಿದ ಸದಸ್ಯರು ಬಂದ್ ಪರ, ವಿರೊಧವಾಗಿ ಚರ್ಚೆ ನಡೆಸಿ, ಸಂಘದ ಸದಸ್ಯ ವಕೀಲರಲ್ಲಿ ಬಹುತೇಕರು ರೈತ ಕುಂಟುಂಬದವರಾಗಿರುವುದರಿಂದ ರೈತರ ಪರವಾದ ಈ ಹೋರಾಟಕ್ಕೆ ಬೆಂಬಲಿಸುವುದು ಅಗತ್ಯ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post