ಬೆಂಗಳೂರು: ಮೀ ಟೂ ಅಭಿಯಾನ ಎಂಬ ಹೆಸರಿನ ಅಡಿಯಲ್ಲಿ ನಟ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ನಟಿ ಶೃತಿ ಹರಿಹರನ್ ಅವರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ರಾಜ್ಯ ಮಹಿಳಾ ಆಯೋಗ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದೆ.
ಈ ಕುರಿತಂತೆ ಪತ್ರ ಬರೆದಿರುವ ಮಹಿಳಾ ಆಯೋಗದ ಅಧ್ಯಕ್ಷರು, ಮೀ ಟೂ ಅಭಿಯಾನದ ಅಡಿಯಲ್ಲಿ ನಟ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಶೃತಿ ಹರಿಹರನ್ ಅವರಿಗೆ ಜೀವ ಬೆದರಿಕೆ ಕರೆಗಳು ಬರುತ್ತಿವೆ. ಮಾಧ್ಯಮಗಳೂ ಸಹ ಈ ಕುರಿತು ಸುದ್ದಿ ಬಿತ್ತರಿಸಿವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಪ್ರಕರಣ ಕುರಿತಂತೆ ಶೃತಿ ಹರಿಹರನ್ ಅವರು ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಅರ್ಜುನ್ ಸರ್ಜಾ ಅವರು ನ್ಯಾಯಾಲಯದ ಮೆಟ್ಟಿಲನ್ನೂ ಏರಿರುತ್ತಾರೆ. ಈ ಹಿನ್ನೆಲೆಯಲ್ಲಿ ಶೃತಿ ಹರಿಹರನ್ ಅವರಿಗೆ ಸೂಕ್ತ ರಕ್ಷಣೆ ಒದಗಿಸಿ, ವರದಿ ನೀಡುವಂತೆ ಕೋರಿದೆ.
Discussion about this post