ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಪುದುಚೇರಿ: ಮುಖ್ಯಮಂತ್ರಿ ನಾರಾಯಣ ಸ್ವಾಮಿ ಅವರು ತಮ್ಮ ಸರ್ಕಾರದ ಬಹುಮತ ಸಾಬೀತಿನಲ್ಲಿ ಸೋತಿದ್ದು, ಈ ಮೂಲಕ ದಕ್ಷಿಣ ಭಾರತದ ಏಕೈಕ ಕಾಂಗ್ರೆಸ್ ಸರ್ಕಾರ ಪಥನವಾದಂತಾಗಿದೆ.
ಇಬ್ಬರು ಶಾಸಕರ ರಾಜೀನಾಮೆಯಿಂದ ಅಲ್ಪ ಮತಕ್ಕೆ ಕುಸಿದಿದ್ದ ಸಿಎಂ ನಾರಾಯಣ ಸ್ವಾಮಿ ಅವರು ತಮ್ಮ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಶ್ವಾಸಮತ ಯಾಚನೆಯಲ್ಲಿ ವಿಫಲವಾಗಿದ್ದಾರೆ.
ನಾಲ್ಕು ಬಾರಿ ಕಾಂಗ್ರೆಸ್ ಶಾಸಕ ಲಕ್ಷ್ಮೀ ನಾರಾಯಣನ್ ಮತ್ತು ಡಿಎಂಕೆ ಶಾಸಕ ವೆಂಕಟೇಶನ್ ಅವರ ರಾಜೀನಾಮೆ ಬಳಿಕ ಅಲ್ಪಮತಕ್ಕೆ ಕುಸಿದಿದೆ. ಈ ಹಿಂದೆ ಕಾಂಗ್ರೆಸ್ ಪಕ್ಷದ ಇಬ್ಬರು ಶಾಸಕರು ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ಸರ್ಕಾರ ಅಲ್ಪಮತಕ್ಕೆ ಕುಸಿದ ಹಿನ್ನೆಲೆಯಲ್ಲಿ ಇಂದು ಸಿಎಂ ನಾರಾಯಣ ಸ್ವಾಮಿ ವಿಶ್ವಾಸ ಮತಯಾಚನೆ ಮಾಡಬೇಕಿತ್ತು. ಆದರೆ ಇಂದು ನಾಲ್ಕು ಬಾರಿ ಕಾಂಗ್ರೆಸ್ ಶಾಸಕ ಲಕ್ಷ್ಮೀನಾರಾಯಣನ್ ಮತ್ತು ಡಿಎಂಕೆ ಶಾಸಕ ವೆಂಕಟೇಶನ್ ಅವರ ರಾಜಿನಾಮೆಯಿಂದಾಗಿ ಪುದುಚೇರಿ ಕಾಂಗ್ರೆಸ್ ಸರ್ಕಾರ ಬಹುಮತವಿಲ್ಲದೇ ಪತನವಾಗಿದೆ.
ಈ ಕುರಿತಂತೆ ಇಂದು ನಡೆದ ವಿಶೇಷ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರ ಬಹುಮತ ಕಳೆದುಕೊಂಡಿದೆ ಎಂದು ಸ್ಪೀಕರ್ ಹೇಳುತ್ತಿದ್ದಂತೆಯೇ ವಿಧಾನಸಭೆಯಿಂದ ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ಮತ್ತು ಕಾಂಗ್ರೆಸ್ ಸದಸ್ಯರು ಹೊರನಡೆದರು. ಈ ಮೂಲಕ ಕಾಂಗ್ರೆಸ್ ಸರ್ಕಾರ ಪತನಗೊಂಡಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post