ಕಲ್ಪ ಮೀಡಿಯಾ ಹೌಸ್ | ಪಂಜಾಬ್ |
ಅಕ್ರಮ ಮರಳು ಗಣಿಗಾರಿಕೆ ಪ್ರಕರಣದಡಿ ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಛನ್ನಿ ಸೋದರಳಿಯ ಭೂಪಿಂದರ್ ಸಿಂಗ್ ಹನಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಡರಾತ್ರಿ ಬಂಧಿಸಿದ್ದಾರೆ.
ಕಳೆದ ತಿಂಗಳು ಭೂಪೇಂದ್ರ ಸಿಂಗ್ ಮನೆ ಮತ್ತು ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು. ಈ ಸಂದರ್ಭದಲ್ಲಿ ಸುಮಾರು 10 ಕೋಟಿ ರೂ. ನಗದನ್ನು ಜಪ್ತಿ ಮಾಡಿದ್ದು, ಅದರಲ್ಲಿ 8 ಕೋಟಿ ರೂ. ಚರಣಜಿತ್ ಸಿಂಗ್ ಛನ್ನಿಯವರಿಗೆ ಸೇರಿದ್ದಾಗಿದೆ ಎನ್ನಲಾಗಿದೆ.

ಪಂಜಾಬ್ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವ ಬೆನ್ನಲ್ಲೆ ಇಂಥದ್ದೊಂದು ಬೆಳವಣಿಗೆ ತುಂಬ ಮಹತ್ವದ್ದೆನಿಸಿದ್ದು, ನಿನ್ನೆ ಸಂಜೆ ಭೂಪಿಂದರ್ ಸಿಂಗ್ ಅವರನ್ನು ಬಂಧಿಸಿದ್ದು, ಇಂದು ಸಿಬಿಐ ಕೋರ್ಟ್‌ಗೆ ಹಾಜರುಪಡಿಸಲಿದೆ ಎಂದು ತಿಳಿದುಬಂದಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















