ಕಲ್ಪ ಮೀಡಿಯಾ ಹೌಸ್ | ಪುತ್ತೂರು |
ಮನೆಗಳ್ಳತನ ಮಾಡಿದ್ದ ಆರೋಪಿ ಕಬಕ ಮೂಲದ ಪ್ರವೀಣ್(27) ಎಂಬಾತನನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.
ಅ.12ರಂದು ಚಿನ್ನದ ಒಡವೆಗಳು ಕಳ್ಳತನವಾದ ಕುರಿತಾಗಿ ಪುತ್ತೂರಿನ #Puttur ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ತನಿಖೆ ನಡೆಸಿದ್ದರು.
1 ಚಿನ್ನದ ಬಳೆ, 1 ಕಿವಿಯೋಲೆ, 1 ಚಿನ್ನದ ಸರ ಹಾಗೂ ಹಣ ಕಳ್ಳತನವಾಗಿದೆ ಎಂದು ದೂರು ದಾಖಲಾಗಿತ್ತು.
ಇದರ ಆಧಾರದಲ್ಲಿ ತನಿಖೆ ನಡೆಸಿದ್ದ ಪೊಲೀಸರು, ಕಬಕ ಗ್ರಾಮದ ಸಿಟಿ ಗುಡ್ಡೆ ಮನೆಯ ಪ್ರವೀಣ್(27) ಎಂಬಾತನನ್ನು ಬಂಧಿಸಿದ್ದಾರೆ. ಆತನಿಂದ ಕಳವು ಮಾಡಿದ ಚಿನ್ನಾಭರಣ ಹಾಗೂ ನಗದು ಹಣವನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾದ್ದು, ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post