ಕಲ್ಪ ಮೀಡಿಯಾ ಹೌಸ್ | ಪುತ್ತೂರು |
ತಾಲೂಕಿನಲ್ಲಿ ನೂತನ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ ಎಂದು ಸಿಎಂ ಸಿದ್ದರಾಮಯ್ಯ #CM Siddaramaiah ಹೇಳಿದ್ದಾರೆ.
ತಮ್ಮ ಬಜೆಟ್ #State Budget ಭಾಷಣದಲ್ಲಿ ಮಾತನಾಡಿದ ಅವರು, ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು #Medical College ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದಿದ್ದಾರೆ.

Also read: ಬೆಂಗಳೂರು ವಿವಿ ಮರುನಾಮಕರಣ ಸೇರಿ ಉನ್ನತ ಶಿಕ್ಷಣಕ್ಕೆ ರಾಜ್ಯ ಬಜೆಟ್’ನಲ್ಲಿ ಸಿಕ್ಕಿದ್ದೇನು? ಇಲ್ಲಿದೆ ಡಿಟೇಲ್ಸ್
ಆರೋಗ್ಯ ಕೇಂದ್ರಗಳ ಉನ್ನತೀಕರಣ
ಹೊಸದಾಗಿ ಘೋಷಣೆಯಾಗಿರುವ ತಾಲ್ಲೂಕುಗಳಾದ ಹನೂರು, ಅಳ್ನಾವರ, ಅಣ್ಣಿಗೇರಿ, ಮಸ್ಕಿ, ಸಿರಿವಾರ, ಕಾಪು, ಬಬಲೇಶ್ವರ, ಕೊಲ್ಹಾರ, ಚೇಳೂರು, ತೇರದಾಳದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಉನ್ನತೀಕರಿಸಲಾಗುವುದು. ಪೊನ್ನಂಪೇಟೆಯಲ್ಲಿ ಹೊಸದಾಗಿ ಸಮುದಾಯ ಆರೋಗ್ಯ ಕೇಂದ್ರವನ್ನು ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಚಿತ್ರದುರ್ಗ ಜಿ¯್ಲÉಯ ಮೊಳಕಾಲ್ಮೂರಿನಲ್ಲಿ 200 ಹಾಸಿಗೆ ಹಾಗೂ ಕೊಡಗು ಜಿ¯್ಲÉಯ ವಿರಾಜಪೇಟೆಯಲ್ಲಿ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post