ಕಲ್ಪ ಮೀಡಿಯಾ ಹೌಸ್ | ಪುತ್ತೂರು |
ವಿಧಾನಸಭಾ ಚುನಾವಣೆಗೆ ಪುತ್ತೂರು ಕ್ಷೇತ್ರದಿಂದ ಸಂಘ ಪರಿವಾರದ ದಕ್ಷಿಣ ಕನ್ನಡದ ಪ್ರಭಾವಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಇಂದು ನಾಮಪತ್ರ ಸಲ್ಲಿಸಿದ್ದು, ಇದಕ್ಕೂ ಮುನ್ನ ನಡೆದ ಮೆರವಣಿಗೆ ಹೊಸ ಇತಿಹಾಸವನ್ನೇ ಸೃಷ್ಠಿ ಮಾಡಿದೆ.
ಪುತ್ತೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿ, ದರ್ಬೆಯಲ್ಲಿ ಶಂಖನಾದ, ಕಹಳೆ ಮೊಳಗಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು. ಹಿಂದೂ ಮುಖಂಡ ದಿವಂಗತ ಮೂಲ್ಕಿ ಸುಖಾನಂದ ಶೆಟ್ಟಿ ಅವರ ಸಹೋದರ ಸಂತೋಷ್ ಶೆಟ್ಟಿ, ಲಕ್ಷ್ಮೀಶ ತಂತ್ರಿ ಅವರು ಕಹಳೆ ಊದಿ ಚಾಲನೆ ನೀಡಿದರು.
ಅಲ್ಲಿಂದ ಆರಂಭವಾದ ಮೆರವಣಿಗೆಯಲ್ಲಿ ಸುಮಾರು 10 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದು, ಇಡಿಯ ಮಾರ್ಗ ಜನರಿಂದ ತುಂಬಿ ಹೋಗಿತ್ತು.
Also read: ಬಿಸಿಲಿನ ತಾಪಮಾನ: ಮಹಾರಾಷ್ಟ್ರದಲ್ಲಿ ಪ್ರಶಸ್ತಿ ಸಮಾರಂಭದಲ್ಲಿ ನೆರೆದಿದ್ದವರಲ್ಲಿ 11 ಮಂದಿ ಸಾವು
ಕೇಸರಿ ಶಾಲು ಧರಿಸಿದ ಸುಮಾರು 10 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹಾಕುತ್ತಿದ್ದ ಜೈಕಾರ ಮುಗಿಲುಮುಟ್ಟಿತ್ತು. ವಿವಿಧ ವಾದ್ಯಗಳ ಮೆರುಗಿನಲ್ಲಿ ಸಾಗಿದ ಮೆರವಣಿಗೆಯುದ್ದಕ್ಕೂ ಅರುಣ್ ಪುತ್ತಿಲ ಅವರಿಗೆ ಹೂವಿನ ಹಾರ ಹಾಕುವ ಮೂಲಕ ಸಾರ್ವಜನಿಕರ ಸ್ವಾಗತ ಕೋರಿ, ಅಭಿನಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post